ಬ್ರೇಕಿಂಗ್ ನ್ಯೂಸ್
11-03-23 11:59 am Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ್ ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಮೃತಪಟ್ಟಿದ್ದಾರೆ.
ಚಾಮರಾಜನಗರದಿಂದ ಎರಡು ಬಾರಿ ಕಾಂಗ್ರೆಸ್ ಸಂಸದರಾಗಿದ್ದ ಧ್ರುವನಾರಾಯಣ್, ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. ಈ ಬಾರಿ ಚುನಾವಣೆಯಲ್ಲಿ ನಂಜನಗೂಡು ಅಸೆಂಬ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯಥಿಯಾಗಿ ಸ್ಪರ್ಧಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.
ಧ್ರುವನಾರಾಯಣ ಅವರಿಗೆ ಆರೋಗ್ಯದ ಸಮಸ್ಯೆ ಇರಲಿಲ್ಲ. ಎದೆ ನೋವು ಶುರುವಾಗಿದೆ ಎಂದು ಶನಿವಾರ ಬೆಳಗ್ಗೆ 6.30ಕ್ಕೆ ಕಾರು ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ರಕ್ತವಾಂತಿ ಆಗಿದ್ದರಿಂದ ತೀವ್ರ ಅಸ್ವಸ್ಥರಾಗಿದ್ದರು. ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಧ್ರುವನಾರಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಧ್ರುವನಾರಾಯಣ್ 1983ರಲ್ಲಿ ಕಾಂಗ್ರೆಸ್ ಪ್ರವೇಶ ಮಾಡಿದ್ದರು. ಚಾಮರಾಜನಗರದಿಂದ ಸಂಸದರಾಗಿ ಎರಡು ಬಾರಿ ಆಯ್ಕೆಯಾಗಿದ್ದರು. ಕೊಳ್ಳೇಗಾಲ ಮತ್ತು ಸಂತೇಮರಹಳ್ಳಿ ಕ್ಷೇತ್ರಗಳಿಂದ ಎರಡು ಬಾರಿ ಶಾಸಕರಾಗಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ ಹಿನ್ನಲೆಯಲ್ಲಿ ಶನಿವಾರದ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಶನಿವಾರ ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ನಡೆಯಬೇಕಿತ್ತು. ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರಜಾ ಧ್ವನಿ ಯಾತ್ರೆ ರದ್ದಾಗಿದೆ. ಮಾಜಿ ಸಂಸದ ಧ್ರುವನಾರಾಯಣ ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.
Karnataka Pradesh Congress Committee (KPCC) Working President R. Dhruvanarayan, 62, passed away in Mysuru on Saturday morning. Mr. Dhruvanarayan, a former MP representing Chamarajanagar Lok Sabha constituency, suffered a cardiac arrest on Saturday morning and passed away at his residence in Mysuru, sources said.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am