ಬ್ರೇಕಿಂಗ್ ನ್ಯೂಸ್
11-03-23 10:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಉಡುಪಿ ಕೃಷ್ಣಮಠಕ್ಕೆ ಮುಸ್ಲಿಮರು ಜಮೀನು ಕೊಟ್ಟಿದ್ದು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೆಸರೆತ್ತದೆ ನಟ ರಕ್ಷಿತ್ ಶೆಟ್ಟಿ ಟೀಕೆ ಮಾಡಿದ್ದಾರೆ. ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?' ಎಂದು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ರಕ್ಷಿತ್ ಶೆಟ್ಟಿ ಪರೋಕ್ಷವಾಗಿ ಮಿಥುನ್ ರೈ ಹೆಸರು ಹೇಳದೆಯೇ ಕಿಡಿಕಾರಿದ್ದಾರೆ. ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?' ಎಂದು ಪ್ರಶ್ನೆ ಮಾಡಿದ್ದಾರೆ. ನಟ ರಕ್ಷಿತ್ ಶೆಟ್ಟಿ ಅವರು ಮಿಥುನ್ ರೈ ಅವರಿಗೇ ಕೊಟ್ಟ ತಿರುಗೇಟು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.
ನಟ ರಕ್ಷಿತ್ ಶೆಟ್ಟಿ ಅವರು ಮಾಡಿರುವ ಟ್ವೀಟ್ಗೆ ಪ್ರದೀಪ್ ಶೆಟ್ಟಿ ಎಂಬವರು ಪ್ರತಿಕ್ರಿಯೆ ನೀಡಿದ್ದು, 'ರಕ್ಷಿತ್ ಶೆಟ್ರೆ ಜಾಸ್ತಿ ಯಾರಿಗೂ ಬಕೆಟ್ ಹಿಡಿಯೋಕೆ ಹೋಗ್ಬೇಡಿ. ದೇವರು ಮೆಚ್ಚುವಂಥ ಕೆಲಸ ಮಾಡಿ ಅಷ್ಟೇ ಸಾಕು' ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಕ್ಷಿತ್ ಶೆಟ್ಟಿ, 'ಉಡುಪಿ ನನ್ನ ಜನ್ಮಸ್ಥಳ. ಬಕೆಟ್ ಅಲ್ಲ, ಟ್ಯಾಂಕರ್ ಹಿಡಿತೀನಿ. ಅಂದಹಾಗೆ ಅವರು ಯಾವ ಭೂಮಿಯ ಬಗ್ಗೆ ಮಾತನಾಡಿದ್ದಾರೆಂಬುದು ಖಚಿತ ಆಗಿಲ್ಲ. ಆದರೆ ಕಾರ್ ಸ್ಟ್ರೀಟ್ನಲ್ಲಿರುವ ಜಮೀನು ಖಂಡಿತವಾಗಿಯೂ ಅಲ್ಲ. ಕೃಷ್ಣ ಮಠಕ್ಕಿಂತ ಅನಂತೇಶ್ವರ ದೇವಸ್ಥಾನ ಹಳೆಯದು. ಇವೆಲ್ಲಕ್ಕಿಂತ ಚಂದ್ರಮೌಳೀಶ್ವರ ದೇವಸ್ಥಾನ ಇನ್ನೂ ಹಳೆಯದು' ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.
'ನನಗೆ ಗೊತ್ತಿಲ್ಲದ ವಿಷಯದ ಬಗ್ಗೆ ನಾನು ಎಂದಿಗೂ ಮಾತನಾಡುವುದಿಲ್ಲ. ಇದು ನನ್ನ ಆಸಕ್ತಿಯ ಕ್ಷೇತ್ರ. ಹೀಗಾಗಿ ನಾನು ಏನು ಮಾತನಾಡುತ್ತಿದ್ದೇನೆಂದು ನನಗೆ ಗೊತ್ತಿದೆ' ಎಂದು ಹೇಳಿದ್ದಾರೆ.
ಇತ್ತೀಚೆಗೆ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ 'ನಮ್ಮೂರ ಮಸೀದಿ ನೋಡ ಬನ್ನಿ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಸೌಹಾರ್ದ ನೆಪದಲ್ಲಿ ಕೃಷ್ಣ ಮಠದ ಬಗ್ಗೆ ಹೋಲಿಕೆ ಮಾಡಿ ಮಾತನಾಡಿದ್ದರು. ಪೇಜಾವರ ಮಠದ ಹಿಂದಿನ ಹಿರಿಯ ಶ್ರೀಗಳು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ 'ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು' ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.
The temple town of Udupi has written history of more than thousand years… Why talk nonsense on a public platform when you have no idea???
— Rakshit Shetty (@rakshitshetty) March 11, 2023
Actor Rakshit Shetty took a sly dig at the controversial remark made by Congress youth leader Mithun Rai stating that “Muslim king had given land to Udupi Sri Krishna Math”.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm