ಬ್ರೇಕಿಂಗ್ ನ್ಯೂಸ್
16-03-23 12:14 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.16: 2022-23ನೇ ಸಾಲಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಮೌಲ್ಯಾಂಕನ(ಬೋರ್ಡ್) ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ವಾರದ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ ಆದೇಶವನ್ನು ರದ್ದುಗೊಳಿಸಿದೆ. ಈ ಮೂಲಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದು, ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ ಎಂದೂ ಆದೇಶ ಮಾಡಿದೆ.
ಬೋರ್ಡ್ ಪರೀಕ್ಷೆಗಳನ್ನು ಮಾರ್ಚ್ 27 ರಿಂದ ನಡೆಸಲು ಹೈಕೋರ್ಟ್ ಸೂಚಿಸಿದೆ. ಮಾರ್ಚ್ 14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಪರೀಕ್ಷೆ ನಡೆಸುವ ರೀತಿ, ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು ಬರುತ್ತವೆಯೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆಯ ಪ್ರಿನ್ಸಿಪಾಲ್ ಸೆಕ್ರೆಟರಿಗೆ ಸೂಚಿಸಿತ್ತು. ಬುಧವಾರ ಈ ಬಗ್ಗೆ ಮಾಹಿತಿ ನೀಡಿದ ಬಳಿಕ ಹೈಕೋರ್ಟ್ ಪರೀಕ್ಷೆಗೆ ಅನುಮತಿ ನೀಡಿತ್ತು.
ಇದು ಮೌಲ್ಯಮಾಪನ ಮಾತ್ರ, ಮಕ್ಕಳಿಗೆ ಸರಿಯಾಗಿ ಪಾಠ ಅರ್ಥವಾಗಿದೆಯೇ ಎನ್ನುವ ಮೌಲ್ಯಮಾಪನ ನಡೆಸಲಾಗುತ್ತದೆ. ಒಂದೊಮ್ಮೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೂ ಅನುತ್ತೀರ್ಣಗೊಳಿಸುವುದಿಲ್ಲ ಎಂದು ಹೈಕೋರ್ಟ್ಗೆ ಸರ್ಕಾರ ತಿಳಿಸಿತ್ತು. ಯಾವ ಕಾರಣಕ್ಕೂ ಪರೀಕ್ಷೆಗೆ ಪಠ್ಯದಿಂದ ಹೊರಗಿನ ಪ್ರಶ್ನೆಗಳನ್ನು ಕೇಳಬಾರದು. ಫಲಿತಾಂಶವನ್ನು ಕೇವಲ ಶಾಲೆಗಳಲ್ಲಿ ಮಾತ್ರ ಘೋಷಿಸಬೇಕು. ಯಾವ ಕಾರಣಕ್ಕೂ ಫಲಿತಾಂಶವನ್ನು ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಪ್ರಕಟಿಸಬಾರದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ.
ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ನೀಡಿದ್ದ ತೀರ್ಪು ಪ್ರಶ್ನಿಸಿ ಸರ್ಕಾರ ಶನಿವಾರವೇ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಜಿ. ನರೇಂದರ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಈ ಬಾರಿ ಪಬ್ಲಿಕ್ ಪರೀಕ್ಷೆ ನಡೆಸಬಾರದು ಎಂದು ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಆದೇಶದಿಂದ ಒಕ್ಕೂಟದ ನಿಲುವಿಗೆ ಹಿನ್ನಡೆಯಾಗಿದೆ.
The Karnataka High Court on Wednesday by an interim order stayed a single bench order which quashed three circulars issued by the State government prescribing a Board like Examination for students of Standards 5 and 8th in schools affiliated to the state board. A division bench of Justice G Narendar and Justice Ashok S Kinagi stayed the order dated March 10 and permitted the State government to hold exams after two weeks.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 11:46 am
Mangalore Correspondent
Mangalore Police, Drugs, Sudheer Kumar Reddy:...
03-07-25 10:50 pm
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
04-07-25 12:31 pm
Mangalore Correspondent
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm