ಬ್ರೇಕಿಂಗ್ ನ್ಯೂಸ್
28-03-23 11:09 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ನಡೆದ ದಾಳಿಗೆ ಬಿಜೆಪಿ ಒಳಗಿನ ವಿರೋಧಿ ಬಣದ ಪಿತೂರಿಯೇ ಕಾರಣ ಎಂದು ಕಾಂಗ್ರೆಸ್ ಕಟಕಿಯಾಡಿದೆ. ಯಡಿಯೂರಪ್ಪ ಸರ್ಕಾರದ ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್ವೈ ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. ಯಡಿಯೂರಪ್ಪ ಅವರ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಲ್ಲದೆ, ಬಂಜಾರ ಸಮುದಾಯದ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆಯೆಂದು ದೂರಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೂ ಕಾಂಗ್ರೆಸ್ ಕಿಡಿಕಾರಿದೆ. ಪ್ರತಿ ಬಾರಿ ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಯ ಬೀಜ ಬಿತ್ತುವುದು ಗೃಹ ಸಚಿವರ ತವರು ಜಿಲ್ಲೆಯಲ್ಲೇ ಏಕೆ..? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ "ಸಂತೋಷ ಕೂಟ"ವನ್ನು ಮೆಚ್ಚಿಸುವ ಷಡ್ಯಂತ್ರವೋ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿವಿದಿದೆ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಶಿಕಾರಿಪುರದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು.
'@BSYBJP ಅವರ ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ ಯಡಿಯೂರಪ್ಪ ವಿರೋಧಿ ಬಣದ ಕೈವಾಡವಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
— Karnataka Congress (@INCKarnataka) March 28, 2023
ದಮ್ಮು ತಾಕತ್ತಿನ ಮುಖ್ಯಮಂತ್ರಿಗಳೇ,
ಒಮ್ಮೆ @CTRavi_BJP ಹಾಗೂ @blsanthosh ಅವರನ್ನು ವಿಚಾರಣೆಗೆ ಒಳಪಡಿಸಿ, ತನಿಖೆ ನಡೆಸಿ.
ಹಾಗೂ BSYರಿಗೆ ಬಿಜೆಪಿಯವರಿಂದ ಅಪಾಯವಿದೆ, ಅವರಿಗೆ ರಕ್ಷಣೆ ಹೆಚ್ಚಿಸಬೇಕು.
BS Yediyurappas home, office attacked by protesters over reservation, BJP leader conspiracy says Congress tweet.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm