ಬ್ರೇಕಿಂಗ್ ನ್ಯೂಸ್
31-03-23 09:45 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ರಾಜ್ಯದಲ್ಲಿ ಚುನಾವಣೆ ಘೋಷಣೆ ಆಗತ್ತಾ ಇದ್ದಂತೆ ಆಡಳಿತಾರೂಢ ಬಿಜೆಪಿಗೆ ಶಾಕ್ ಮೇಲೆ ಶಾಕ್ ಆಗತೊಡಗಿದೆ. ಹಲವು ಶಾಸಕರು ಪಕ್ಷ ಬಿಡಲು ತೀರ್ಮಾನಿಸಿದ್ದರೆ, ಕೆಲವರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣ ತನಗೆ ಈ ಬಾರಿ ಟಿಕೆಟ್ ಸಿಗಲ್ಲ ಎಂದು ಖಾತ್ರಿಯಾಗುತ್ತಿದ್ದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನ ಭೇಟಿಯಾಗಿ ಗೋಪಾಲಕೃಷ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಗೋಪಾಲಕೃಷ್ಣ ಈ ಮೊದಲು ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಥರ್ಧಿಸಿ ಶಾಸಕರಾಗಿದ್ದರು. 2018ರಲ್ಲಿ ಬಿಜೆಪಿ ಸೇರಿ ಕೂಡ್ಲಿಗಿ ಕ್ಷೇತ್ರದಿಂದ ಶಾಸಕರಾಗಿದ್ದರು. ಈ ಬಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಅನ್ನುವ ಚರ್ಚೆ ಇತ್ತು. ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ವಿಚಾರವನ್ನ ಅಲ್ಲೆಗೆಳೆದಿದ್ದಾರೆ.
ಇವರು ಕಾಂಗ್ರೆಸ್ ನಿಂದ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವ ಬದಲು ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಆರು ಬಾರಿ ಶಾಸಕರಾಗಿದ್ದರೂ ಸಚಿವ ಸ್ಥಾನ ನೀಡಿಲ್ಲ. ಕಾಂಗ್ರೆಸ್ ನಲ್ಲಿ ಇದ್ದಾಗಲೂ ಸ್ಥಾನ ನೀಡಿಲ್ಲ ಎಂದವರು ನೋವು ಹೇಳಿಕೊಂಡಿದ್ದಾರೆ. ವಯಸ್ಸಾಗಿರುವ ಕಾರಣಕ್ಕೆ ಬೇರೆ ಪಕ್ಷಕ್ಕೂ ಸೇರಲ್ಲ. ಸ್ಪರ್ಧೆಯನ್ನೂ ಮಾಡಲ್ಲ ಅಂದಿದ್ದಾರೆ. ಮೂಲಗಳ ಪ್ರಕಾರ ಎನ್ ವೈ ಗೋಪಾಲಕೃಷ್ಣ ಪುತ್ರ ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದ್ದು, ಈ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದಾರಂತೆ. ನಾಲ್ಕು ಬಾರಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಶಾಸಕರಾಗಿ, ಒಮ್ಮೆ ಬಳ್ಳಾರಿ ಗ್ರಾಮೀಣ ಹಾಗೂ ಕೂಡ್ಲಿಗಿ ಶಾಸಕರಾಗಿ ಆಯ್ಕೆಯಾಗಿದ್ದರು.
ಹಾವೇರಿಯಲ್ಲಿ ಕಾಂಗ್ರೆಸ್ ಹಿನ್ನಡೆ ; ಮಾಜಿ ಸಚಿವ ಮನೋಹರ ತಹಸೀಲ್ದಾರ್ ಜೆಡಿಎಸ್ ಗೆ

ಇದೇ ವೇಳೆ, ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲೂ ಭರದ ರಾಜಕೀಯ ಚಟುವಟಿಕೆ ನಡೆದಿದೆ. ಮಾಜಿ ಸಚಿವ
ಮನೋಹರ ತಹಸೀಲ್ದಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಹಾನಗಲ್ ಪಟ್ಟಣದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ ಮನೋಹರ ತಹಶಿಲ್ದಾರ, ಜೆಡಿಎಸ್ ಸೇರುವ ಘೋಷಣೆ ಮಾಡಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿಯೇ ಜೆಡಿಎಸ್ ಅಭ್ಯರ್ಥಿಯಾಗಿ ಮನೋಹರ ತಹಸೀಲ್ದಾರ್ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾಹಿತಿ ಇದೆ. ಎಪ್ರಿಲ್ 7 ರಂದು ಹಾನಗಲ್ ಪಟ್ಟಣಕ್ಕೆ ಪಂಚರತ್ನ ಯಾತ್ರೆ ಆಗಮಿಸಲಿದ್ದು ಅದೇ ವೇಳೆಗೆ ಸ್ಪರ್ಧೆ ಘೋಷಣೆ ಆಗಲಿದೆ.
The sitting Bharatiya Janata Party (BJP) MLA from Kudligi assembly constituency, NY Gopalakrishna, resigned on Friday. He is likely to join Congress ahead of the Karnataka Assembly elections. According to sources, the MLA has been in touch with the Congress and has sought a ticket to contest the upcoming elections from the grand old party.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm