ಬ್ರೇಕಿಂಗ್ ನ್ಯೂಸ್
05-04-23 10:12 pm HK News Desk ಕರ್ನಾಟಕ
ಚಾಮರಾಜನಗರ, ಎ.5: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆ ದೃಷ್ಟಿಯಿಂದ ನಾಳೆಯಿಂದಲೇ ಬಂಡೀಪುರದಲ್ಲಿ ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್ ಗಳನ್ನು ಬಂದ್ ಮಾಡಲಾಗುತ್ತಿದೆ.
ಪ್ರಧಾನಿ ಮೋದಿ ಅವರು ಏಪ್ರಿಲ್ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಗುರುವಾರದಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಬಂಡೀಪುರ ವ್ಯಾಪ್ತಿಯ ಎಲ್ಲ ಹೋಂ ಸ್ಟೇಗಳು, ರೆಸಾರ್ಟ್ ಗಳನ್ನು ಬಂದ್ ಮಾಡಲಾಗುತ್ತಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿದ ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು, ರಸ್ತೆ ನಿರ್ವಹಣೆ, ಪೂರ್ವ ಸಿದ್ದತೆ, ಹಾಗೂ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಬಂಡೀಪುರವನ್ನು ತಲುಪುವ ಮಾರ್ಗದ ದುರಸ್ತಿ ಕಾರ್ಯ ನಡೆದಿದೆ. ಅಲ್ಲದೆ ಮೇಲುಕಮನಹಳ್ಳಿಯಲ್ಲಿಯೂ(ಸಫಾರಿ ಪಾಯಿಂಟ್) ರಸ್ತೆಗಳನ್ನು ದುರಸ್ತಿ ಮಾಡಿಸಿ, ಸಫಾರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯು ನಿರತರಾಗಿದ್ದಾರೆ.
ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.
ಮೋದಿ ತಮಿಳನಾಡು ಮತ್ತು ತೆಲಂಗಾಣ ಭೇಟಿ ;
ಮೋದಿಯವರು ಏಪ್ರಿಲ್ 8 ಮತ್ತು 9 ರಂದು ತೆಲಂಗಾಣ ಮತ್ತು ತಮೀಳನಾಡಿಗೂ ಭೇಟಿ ನೀಡಲಿದ್ದಾರೆ. ತೆಲಂಗಾಣ ಭೇಟಿ ವೇಳೆ 11,300 ಕೋಟಿ ರೂ. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇನ್ನು ಸಿಕಂದರಾಬಾದ್ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಹಾಗೇ ಬಿಬಿನಗರದಲ್ಲಿ ಏಮ್ಸ್ ಆಸ್ಪತ್ರೆಗೆ ಶಂಕುಸ್ಥಾಪನೆ ಮತ್ತು ಸಿಕಂದರಾಬಾದ್ ರೇಲ್ವೆ ನಿಲ್ದಾಣದ ಅಭಿವೃದ್ದಿಗೆ ಚಾಲನೆ ನೀಡಲಿದ್ದಾರೆ.
There will be no safari for the general public from April 6 to 9 in view of Prime Minister Narendra Modi’s visit to the Project Tiger reserve in Bandipur on Sunday. The Prime Minister is visiting Mysuru in connection with the commemorative event to mark 50 years of Project Tiger which will be held in the city from April 9 to 11.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm