ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm