ಬ್ರೇಕಿಂಗ್ ನ್ಯೂಸ್
16-04-23 10:14 am Bengaluru Correspondent ಕರ್ನಾಟಕ
ಹುಬ್ಬಳ್ಳಿ, ಎ.16: ಬಿಜೆಪಿಯನ್ನು ಮುಗಿಸಲು ಕೆಲವರು ಷಡ್ಯಂತ್ರ ನಡೆಸಿದ್ದಾರೆ. ಅದರ ಭಾಗವಾಗಿಯೇ ನಮ್ಮಂಥವರನ್ನು ಟಾರ್ಗೆಟ್ ಮಾಡಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅಂತ ಹೀಗೆ ಮಾಡ್ತಿದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಶಿರಸಿಗೆ ತೆರಳುತ್ತಿದ್ದೇನೆ. ಸ್ಪೀಕರ್ ಕಾಗೇರಿ ಅವರ ಬಳಿ ಸಮಯ ಕೇಳಿದ್ದು, 10:30ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಪಕ್ಷದ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಮಾತನಾಡಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ ಎಂದು ತಿಳಿಸಿದರು.
ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದ ಜಗದೀಶ್ ಶೆಟ್ಟರ್, ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಒಂದು ಹೆಜ್ಜೆ ಮುಂದೆ ಇಟ್ಟಿದ್ದೀನಿ, ಹಿಂದೆ ಸರಿಯಲ್ಲ ಎಂದು ಸ್ಪಷ್ಟಪಡಿಸಿದರು
ಪಕ್ಷ ನನಗೆ ಎಲ್ಲಾ ಸ್ಥಾನಮಾನ ನೀಡಿದೆ. ನನ್ನ ಮೂವತ್ತು ವರ್ಷ ರಾಜಕಾರಣದಲ್ಲಿ ಕಳೆದ ಮೂರು ತಿಂಗಳು ಮಾತ್ರ ಅತ್ಯಂತ ಕೆಟ್ಡ ದಿನ. ನಾನು ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷವನ್ನು ಕೆಳ ಮಟ್ಟದಿಂದ ಕಟ್ಟಿದ್ದೇನೆ. ಪಕ್ಷ ನನಗೆ ಎಲ್ಲ ಗೌರವ ಕೊಟ್ಟಿದೆ. ಹೀಗಾಗಿ ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಇಲ್ಲ. ಸೆಕ್ಸ್ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ಪಕ್ಷ ನಮ್ಮನ್ನು ಯೂಸ್ & ಥ್ರೋ ಮಾಡಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ ಎಂದರು.
ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲಾ ಆಪ್ಷನ್ ಓಪನ್ ಇವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ಮೋದಿ, ಅಮಿತ್ ಶಾಗೆ ಗ್ರೌಂಡ್ ಲೆವಲ್ ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು, ಇಲ್ಲಿನ ನಾಯಕರು ಬಿಜೆಪಿ ಅಧಿಕಾರಕ್ಕೆ ತರುವುದು ಬೇಡ ಅಂತ ತೀರ್ಮಾನ ಮಾಡಿದಂತಿದೆ ಎಂದು ಬೇಸರ ಹೊರಹಾಕಿದರು.
ಕಾಂಗ್ರೆಸ್ನ ಮುಖಂಡರು ಯಾರೂ ಸಂಪರ್ಕಿಸಿಲ್ಲ, ಆದರೆ ಪ್ರತಿನಿಧಿ ಕಳಿಸಿದ್ದಾರೆ. ಕೆಲವರ ಹಿತಕ್ಕಾಗಿ ಬಿಜೆಪಿ ಬಲಿಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ. ನಾನು ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನವಾಗಿ ಕಂಡಿದ್ದೇನೆ. ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ. ಟೇಕನ್ ಇಟ್ ಗ್ರ್ಯಾಂಟೆಡ್ ಅನ್ನೋ ಹಾಗೆ ಮಾತಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರದ ವರೆಗೆ ಕೇಂದ್ರ ನಾಯಕರಿಗೆ ಗಡುವು ಕೊಟ್ಟಿದ್ದ ಶೆಟ್ಟರ್ ನಿನ್ನೆ ರಾತ್ರಿ ರಾಜಿನಾಮೆ ನಿರ್ಧಾರ ಪ್ರಕಟಿಸಿದ್ದಾರೆ.
ನಾಲ್ಕು ದಿನ ಟಿಕೆಟ್ಗಾಗಿ ಸರ್ಕಸ್ ಮಾಡಿದ ಶೆಟ್ಟರ್ ;
ಈ ಬಾರಿ ವಿಧಾನಸಭೆ ಚುನಾವಣೆಗೆ ಏ.11 ಎಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಯಿತು. ಆದರೆ, 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರು ಇರಲಿಲ್ಲ. ಈ ಹಿನ್ನೆಲೆ ಅವರು ಬೇಸರಗೊಂಡಿದ್ದರು. ಕೂಡಲೇ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ದೆಹಲಿಗೆ ಕರೆಸಿಕೊಂಡು ಮಾತನಾಡಿದರು. ದೆಹಲಿಯಿಂದ ವಾಪಾಸ್ ಆದ ಬಳಿಕವೂ ಶೆಟ್ಟರ್ ನನಗೆ ಟಿಕೆಟ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಬುಧವಾರ, ಏ.12 ಘೋಷಣೆಯಾಗದ ಬಿಜೆಪಿ ಎರಡನೇ ಪಟ್ಟಿಯಲ್ಲಿಯೂ ಜಗದೀಶ್ ಶೆಟ್ಟರ್ ಹೆಸರಿರಲಿಲ್ಲ. ಆ ಬಳಿಕ ಶೆಟ್ಟರ್ ಅವರ ಬಂಡಾಯ ಜೋರಾಯ್ತು. ಕೇಂದ್ರ ಸಚಿವ ಜೋಶಿ ಸೇರಿದಂತೆ ಹಲವು ನಾಯಕರು ಮನವೊಲಿಸಲು ಮುಂದಾದರೂ ಯಾವುದೇ ಪ್ರಯೋಜನ ಆಗಲಿಲ್ಲ. ಕೊನೆಗೆ ಸಿಎಂ ಸಭೆಯು ವಿಫಲವಾಗುತ್ತಿದ್ದಂತೆ ಶೆಟ್ಟರ್ ರಾಜೀನಾಮೆ ನೀಡುವುದಾಗಿ ಮಾಧ್ಯಮಗಳಿಗೆ ಘೋಷಿಸಿದರು.
Former Chief Minister Jagadish Shettar is all set to resign from the Bharatiya Janata Party (BJP) on Sunday, April 16, after talks with the party seniors failed on Saturday. The senior BJP leader had expressed his unhappiness openly after being asked to step down from contesting and make way for other younger leaders. Shettar has represented the Hubballi-Dharwad Central constituency for six terms since 1994.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm