ಬ್ರೇಕಿಂಗ್ ನ್ಯೂಸ್
20-04-23 05:33 pm Bangalore Correspondent ಕರ್ನಾಟಕ
ಬೆಂಗಳೂರು, ಎ.20: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಹಿಂದೂ ವಿರೋಧಿ ಮತ್ತು ಮುಸಲ್ಮಾನರ ನಾಯಕ, ಅದೇ ಪಕ್ಷದ ಡಿ.ಕೆ.ಶಿವಕುಮಾರ್ ಕ್ರಿಮಿನಲ್ಗಳ, ರಸ್ತೆಯಲ್ಲಿ ಗೋಹತ್ಯೆ ಮಾಡುವವರ ನೇತಾರ ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಂಚಾಲಕರಾದ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು.
ನಗರದ ಮಲ್ಲೇಶ್ವರದ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ ಕೈ ಕೊಳಕಾಗಿದೆ. ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಪರಾಧಿಗಳ ಜೊತೆ ಕೈ ಜೋಡಿಸಿದ್ದಾರೆ. ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ನನ್ನ ಸಹೋದರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ʻʻಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ತಡೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡು ರಸ್ತೆಯಲ್ಲಿ ಗೋವುಗಳನ್ನು ಹತ್ಯೆ ಮಾಡಿದ್ದ ಕಾಂಗ್ರೆಸ್ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ರಿಜಿನ್ ಚಂದ್ರನ್ ಬಳಿಕ ಗೋವಿನ ರಕ್ತದ ಜೊತೆ ಚೆಲ್ಲಾಟವಾಡಿದ್ದ. ಇಂತವನ ಜೊತೆ ಡಿ.ಕೆ.ಶಿವಕುಮಾರ್ ಓಡಾಡುತ್ತಾರೆ. ರಾಹುಲ್ ಗಾಂಧಿ ಇವನ ಜೊತೆ ಪಾದಯಾತ್ರೆ ಮಾಡುತ್ತಾರೆʼʼ ಎಂದು ಕಿಡಿಕಾರಿದರು.
ಹಿಂದೂ ಯುವಕರ ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡಿದೆ. ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ತಪ್ಪಿತಸ್ಥರೆಂದು ಸಾಬೀತಾಗಿ ಜೈಲಿನಲ್ಲಿದ್ದಾರೆ. ಪಿಎಫ್ಐ ವಿರುದ್ಧ ಇದ್ದ 175 ಪ್ರಕರಣಗಳನ್ನು ವಾಪಸ್ ಪಡೆಯಬಾರದೆಂದು ಗೃಹ ಇಲಾಖೆಯೇ ತನ್ನ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ 1,700 ಪಿಎಫ್ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಂಡಿತು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಕೈ ಕಲುಷಿತಗೊಂಡಿದೆ. ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ ಎಂದು ಅವರು ಹೇಳಿದರು. ದೇಶದ್ರೋಹಿಗಳು, ಅಪರಾಧಿಗಳ ಜೊತೆ ನಿಂತಿರುವ ಕಾಂಗ್ರೆಸ್ ಅನ್ನು ರಾಜ್ಯದ ಜನ ಒಪ್ಪುವುದಿಲ್ಲ. ಮತ್ತು ಜನತೆ ಅವರ ಮಾತುಗಳಿಗೆ ಮರುಳಾಗುವುದಿಲ್ಲ. ಹಣದ ಅಹಂಕಾರದಿಂದ ಮೆರೆಯುತ್ತಿರುವ ಕಾಂಗ್ರೆಸ್ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕು.ಶೋಭಾ ಕರಂದ್ಲಾಜೆ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಶ್ರದ್ಧೆ, ನಮ್ಮ ಭಾವನೆಗಳ ವಿರುದ್ಧ ಇವತ್ತು ಕಾಂಗ್ರೆಸ್ ಪಕ್ಷವು ಮಾತನಾಡುತ್ತಿದೆ. ಎಲ್ಲವನ್ನು ರೋಲ್ ಬ್ಯಾಕ್ ಮಾಡುವುದಾಗಿ ಹೇಳುತ್ತಾರೆ. ಅದಕ್ಕಾಗಿ ರಾಜ್ಯದ ಜನರು ರೋಲ್ ಬ್ಯಾಕ್ ಮಾಡುತ್ತಾರೆ. ರೋಲ್ ಬ್ಯಾಕ್ ಮಾಡುವುದು, ಕಾಂಗ್ರೆಸ್ಸನ್ನು ಮನೆಗೆ ಕಳುಹಿಸುವುದನ್ನು ಮಾಡಲಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷವಾಗಿ ಉಳಿದಲ್ಲ. ಅದೇ ರೀತಿಯ ಪರಿಸ್ಥಿತಿ ಕರ್ನಾಟಕದಲ್ಲಿ ಬರಲಿದೆ ಎಂದು ನುಡಿದರು.
Siddaramaiah is a Muslim leader and Dk Shivakumar is a king for criminal activities slams shobha karandlaje. Congress has become most corrupted supporting illegal activities in the state she added.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm