ಬ್ರೇಕಿಂಗ್ ನ್ಯೂಸ್
29-04-23 10:17 pm Bangalore Correspondent ಕರ್ನಾಟಕ
ಬೆಂಗಳೂರು, ಎ.29 : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿಂದು ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ನೈಸ್ ರಸ್ತೆ ಜಂಕ್ಷನ್ ನಿಂದ ಸುಮಾರು 5.30 ಕಿಲೋ ಮೀಟರ್ ದೂರ ಮಾಗಡಿ ರಸ್ತೆಯ ಸುಮ್ಮನಹಳ್ಳಿಯವರೆಗೂ ತೆರೆದ ವಾಹನದಲ್ಲಿ ಮೋದಿ ರೋಡ್ ಶೋ ನಡೆಸಿದರು. ಬಿಜೆಪಿ ಹಿರಿಯ ಮುಖಂಡರಾದ ಡಿ. ವಿ. ಸದಾನಂದಗೌಡ ಹಾಗೂ ಛಲವಾದಿ ನಾರಾಯಣ ಸ್ವಾಮಿ ಮೋದಿ ಅವರಿಗೆ ಸಾಥ್ ನೀಡಿದರು.
ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲ್ಲಗಳಲ್ಲಿ ಭಾರೀ ಜನಸ್ತೋಮವೇ ನೆರೆದಿತ್ತು. ಮೋದಿ ಮೋದಿ ಎಂಬ ಘೋಷಣೆ ಮುಗಿಲು ಮಟ್ಟಿತ್ತು. ಬಿಜೆಪಿ ಕಾರ್ಯಕರ್ತರು ಮೋದಿ ಅವರತ್ತ ಹೂ ಮಳೆಗರೆದರು. ಮೋದಿ ಜನರತ್ತ ಕೈ ಬೀಸುತ್ತಾ ತೆರೆದ ವಾಹನದಲ್ಲಿ ತೆರಳಿದರು. ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ಬಿಜೆಪಿ ಚಿಹ್ನೆ ಇರುವ ಪೇಟ ಧರಿಸಿ ಮೋದಿ ರೋಡ್ ಶೋ ನಡೆಸಿದರು. ಮೋದಿ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಸಾಥ್ ನೀಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ರೋಡ್ ಶೋ ನಡೆಯಿತು.
ಮೋದಿ ರೋಡ್ ಶೋ ಭದ್ರತೆಗೆ ಬೆಂಗಳೂರು 7 ಸುತ್ತಿನ ಕೋಟೆಯಂತಾಗಿತ್ತು. ರಸ್ತೆಗೆ ಬ್ಯಾರಿಕೇಡ್ಗಳನ್ನು ಹಾಕಿ, ಅಂಗಡಿ-ಮುಂಗಟ್ಟುಗಳನ್ನು ಕ್ಲೋಸ್ ಮಾಡಿ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಚ್ಚುವರಿಯಾಗಿ ಹತ್ತು ಕೆಎಸ್ಆರ್ಪಿ ತುಕಡಿ, 50 ಮೀಟರ್ ಒಬ್ಬರಂತೆ ಪ್ರತಿ ಬಿಲ್ಡಿಂಗ್ ಮೇಲೆ ಪೊಲೀಸರ ನಿಯೋಜನೆ ಮಾಡಲಾಗಿತ್ತು.
ಬೀದರ್, ವಿಜಯಪುರ, ಬೆಳಗಾವಿ ಇಂದು ಮೋದಿ ಪ್ರಚಾರವನ್ನು ನಡೆಸಿ ಬೆಂಗಳೂರಿಗೆ ಆಗಮಿಸಿದ್ದರು. ಮೋದಿಯನ್ನು ನೋಡಲು ಸಾವಿರಾರು ಕಾರ್ಯಕರ್ತರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿ “ಮೋದಿ ಮೋದಿ” ಎಂದು ಜಯಘೋಷ ಹಾಕುತ್ತಿದ್ದರು.
ಬೆಂಗಳೂರಿನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ, ನಾಳೆ ಕೋಲಾರ, ಚನ್ನಪಟ್ಟಣ ಮತ್ತು ಮೈಸೂರಿನಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Prime Minister Narendra Modi took out his first road show in Karnataka ahead of the assembly election. PM Modi's mega road show of strength comes as the ruling BJP in Karnataka - the gateway to the south for the party - looks to retain power. PM Modi held the road show in Bengaluru North constituency.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 12:56 pm
Mangalore Correspondent
Mangalore FIR, Dharmasthala, Criminal Activit...
04-07-25 10:54 pm
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
05-07-25 01:20 pm
Mangalore Correspondent
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm