ಬ್ರೇಕಿಂಗ್ ನ್ಯೂಸ್
05-05-23 10:00 pm HK News Desk ಕರ್ನಾಟಕ
ಧಾರವಾಡ, ಮೇ 5: ಸ್ವಾತಂತ್ರ್ಯ ಬಂದಾಗಿನಿಂದಲೂ ರೇಷನ್ ಕೊಡಲಾಗುತ್ತಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರೇಷನ್ ಕೊಟ್ಟಿದ್ದೇನೆ ಅನ್ನುವ ತರಹ ಹೇಳುತ್ತಿದ್ದಾರೆ. ಮೋದಿ ಅಕ್ಕಿಗೆ ಸಿದ್ದರಾಮಯ್ಯ ಅವರು ಖಾಲಿ ಚೀಲ ಮಾತ್ರ ಕೊಟ್ಟಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಶುಕ್ರವಾರ ಕಲಘಟಗಿಯಲ್ಲಿ ಕ್ಷೇತ್ರದ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ನವರು 200 ಯೂನಿಟ್ ವಿದ್ಯುತ್ ಕೊಡುತ್ತೇನೆ ಅಂತ ಹೇಳುತ್ತಾರೆ. ಜನರು ಉಪಯೋಗ ಮಾಡುವುದೇ 75 ಯೂನಿಟ್ ಉಪಯೋಗ ಮಾಡುತ್ತಾರೆ. ಮೇ 10 ರ ವರೆಗೂ ಇವರ ಗ್ಯಾರಂಟಿ, ಆ ಮೇಲೆ ಗಳಗಂಟಿ ಎಂದು ವ್ಯಂಗ್ಯವಾಡಿದರು.

ಕಿಸಾನ್ ಸಮ್ಮಾನ್ನಡಿ 54 ಲಕ್ಷ ರೈತರಿಗೆ ನೆರವು ;
ರೈತರಿಗೆ ನೇರವಾಗಿ ಕಿಸಾನ್ ಸಮ್ಮಾನ್ ಯೋಜನೆ ಅಡಿ 54 ಲಕ್ಷ ರೈತರಿಗೆ ನೇರವಾಗಿ ತಲುಪಲಿದೆ. ರೈತರ ಮಕ್ಕಳಿಗೆ ಕಿಸಾನ್ ಸಮ್ಮಾನ ಯೋಜನೆ ಜಾರಿಗೆ ತಂದಿದ್ದೇವೆ. ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಆಂತರಿಕ ಮೀಸಲಾತಿ ಹೆಚ್ಚಳ ಮಾಡಿದ್ದೇನೆ ಎಂದರು.
![]()
ಹಣಕ್ಕಾಗಿ ಮತ ಮಾರಾಟ ಮಾಡಲ್ಲ ಎಂದು ತೀರ್ಮಾನಿಸಿ;
ಕಲಘಟಗಿ ಜನರು ಹಣಕ್ಕಾಗಿ ಮತ ಮಾರಾಟ ಮಾಡುವುದಿಲ್ಲ ಅಂತ ತೀರ್ಮಾನ ಮಾಡಿ, ನಾಗರಾಜ ಛಬ್ಬಿಯ ಜನ ಶಕ್ತಿ ಹಾಗೂ ಹಣ ಶಕ್ತಿಯ ನಡುವೆ ಸಂಘರ್ಷ ನಡೆಯುತ್ತಿದೆ. ಮೇ 10 ಕ್ಕೆ ಜನ ಶಕ್ತಿಯ ಎದುರು ಹಣ ಶಕ್ತಿ ಸೋಲಲಿದೆ ಅಂತ ತೋರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಬಗ್ಗೆ ಯಾರಿಗೂ ಭರವಸೆ ಇರಲಿಲ್ಲ;
ರಾಜ್ಯಾದ್ಯಂತ ಬಿಜೆಪಿಗೆ ಯಾಕೆ ಬೆಂಬಲ ದೊರೆಯುತ್ತಿದೆ ಎಂದರೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತುಷ್ಟೀಕರಣ, ಭ್ರಷ್ಟಾಚಾರ, ರೈತರ ಆತ್ಮಹತ್ಯೆ, ರೈತನ ದುಸ್ಥಿತಿಯನ್ನು ಕೇಳುವವರಿರಲಿಲ್ಲ. ದುಡಿಯುವ ವರ್ಗ ನಿರಾಶರಾಗಿದ್ದರು. ವಿದ್ಯಾರ್ಥಿಗಳಿಗೆ ಕೆಲಸ ಸಿಗುವ ಭರವಸೆ ಇರಲಿಲ್ಲ. ಇವರು ಮಾತ್ರ ಭಾಗ್ಯದ ಮೇಲೆ ಭಾಗ್ಯ ಕೊಡುತ್ತ ಬಂದಿದ್ದಾರೆ ಎಂದರು.

ಬಜರಂಗ ದಳ ಬ್ಯಾನ್ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ;
ಕಾಂಗ್ರೆಸ್ ನವರು ಎಸ್ಡಿಪಿಐ ಪಿಎಫ್ ಐ ಜೊತೆ ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿದ್ದಾರೆ. ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಬಜರಂಗದಳ ದೇಶಾದ್ಯಂತ ಇರುವ ಸಂಘಟನೆ. ಅದನ್ನು ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ ಎಂದರು.
Chief Minister Basavaraj Bommai said on Friday, May 5, that the Congress was haunted by the spectre of defeat and was hence feeling insecure.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm