ಬ್ರೇಕಿಂಗ್ ನ್ಯೂಸ್
09-05-23 09:27 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9: ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ದಿನ ಇರುವಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬೆಂಬಲಿಗರ ನಡುವಿನ ಮುಸುಕಿನ ಗುದ್ದಾಟ ಮತ್ತು ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಪ್ರಸ್ತಾಪ ಮಾಡಲಾಗಿದೆ.
ಆದರೆ ಈ ಪತ್ರ ನಕಲಿಯಾಗಿದ್ದು, ಯಾರೋ ಕಿಡಿಗೇಡಿಗಳು ಈ ರೀತಿ ಪತ್ರ ಬರೆದು ಹರಿಯಬಿಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಸಂಬಂಧ ಸರಿಯಿಲ್ಲ ಎನ್ನುವಂತೆ ಬಿಂಬಿಸಲು ಇಂತಹ ಪತ್ರ ಸೃಷ್ಟಿಸಿದ್ದಾರೆ. ಇದರ ಹಿಂದೆ ಆರೆಸ್ಸೆಸ್ ಕೈವಾಡವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪತ್ರದಲ್ಲಿ ಬಹಳಷ್ಟು ವಿಚಾರಗಳನ್ನು ಬರೆಯಲಾಗಿದ್ದು, ಕೋಲಾರದಲ್ಲಿ ಟಿಕೆಟ್ ತಪ್ಪಿಸಿದ್ದು ಡಿಕೆಶಿ. ಅಲ್ಲದೆ, ವರುಣಾ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಸೋಮಣ್ಣ ಪರ ಡಿಕೆಶಿ ಫಂಡಿಂಗ್ ಮಾಡಿದ್ದಾರೆ. ಸೋಮಣ್ಣಗೆ ಕೋಟಿ ಕೋಟಿ ಹಣ ನೀಡಿದ್ದರ ಸಾಕ್ಷ್ಯ ಇದೆ ಎಂದು ಬರೆಯಲಾಗಿದೆ.
ಇದಲ್ಲದೆ, ಸಿದ್ದರಾಮಯ್ಯ ಬೆಂಬಲಿಗರಿಗೂ ಡಿಕೆಶಿ ಟಿಕೆಟ್ ತಪ್ಪಿಸಿದ್ದಾರೆ. ಕೆಲವರಿಗೆ ಟಿಕೆಟ್ ಸಿಕ್ಕಿದ್ದರೂ, ಅವರಿಗೆ ಪಾರ್ಟಿ ಫಂಡ್ ನೀಡದೆ ಬೇಕಾದ್ರೆ ಚುನಾವಣೆ ಮಾಡಿಕೊಳ್ಳಿ ಅಂತ ಡಿಕೆ ಶಿವಕುಮಾರ್ ಹೇಳಿ ಕಳಿಸಿದ್ದಾರೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಡಿಕೆಶಿ ಓಬಿಸಿ ವರ್ಗದ ಆಕಾಂಕ್ಷಿಗಳಿಗೆ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್ ಗೆ ತನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸಿದ್ದಾರೆ. ತರೀಕೆರೆಯ ಓಬಿಸಿ ವರ್ಗದ ಗೋಪಿಕೃಷ್ಣನಿಗೂ ಟಿಕೆಟ್ ತಪ್ಪಿಸಿದ್ದಾರೆ. ಚಾಮರಾಜನಗರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ.
ಅಲ್ಲದೆ, ವರುಣಾ ಕ್ಷೇತ್ರ ಬಿಟ್ಟು ಹೊರ ಹೋಗದಂತೆ ನನ್ನನ್ನು ಕಟ್ಟಿ ಹಾಕಿದ್ದಾರೆ. ಅಲ್ಲದೆ, ಜೆಡಿಎಸ್ ಜೊತೆಗೆ ಒಳ ಒಪ್ಪಂದ ಮಾಡಿಕೊಂಡು ಆ ಪಕ್ಷದಿಂದ ವರುಣಾದಲ್ಲಿ ತನ್ನ ವಿರುದ್ಧ ದಲಿತ ಅಭ್ಯರ್ಥಿಯನ್ನು ನಿಲ್ಲಿಸಿ, ನನ್ನ ಸೋಲಿಗೆ ಪ್ರಯತ್ನಿಸಿದ್ದಾರೆ. ಡಿಕೆಶಿ ತಾನೊಬ್ಬನೇ ನಾಯಕನೆಂದು ರಾಜ್ಯದಲ್ಲಿ ತಿರುಗಾಡಿ ನನ್ನನ್ನು ಮೂಲೆಗುಂಪು ಮಾಡಿದ್ದಾರೆ. ಈ ರೀತಿ ಮಾಡುವುದು ಮೊದಲೇ ಗೊತ್ತಿದ್ದರೆ, ನಾನು ನನ್ನ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ರಾಜಕೀಯ ನಿವೃತ್ತಿ ಹೇಳುತ್ತಿದ್ದೆ. ವರುಣಾ ಕ್ಷೇತ್ರದಲ್ಲಿ ಗೆದ್ದರೂ, ಒಂದು ವರ್ಷದ ಬಳಿಕ ರಾಜಿನಾಮೆ ಕೊಟ್ಟು ಉಪ ಚುನಾವಣೆಯಲ್ಲಿ ಮಗ ಯತೀಂದ್ರನನ್ನು ಗೆಲ್ಲಿಸುತ್ತೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ನನ್ನ ಮತ್ತು @DKShivakumar ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು.
— Siddaramaiah (@siddaramaiah) May 8, 2023
ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ
ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಲಿದ್ದೇನೆ.
2/2 pic.twitter.com/dPtCbqKZqM
"I appeal to the people that a fake letter has been written in my name addressing to Congress president Mallikarjun Kharge. This is not my letter. Some mischievous people hatched the conspiracy of creating a fake letter with an intention to create a dispute between me and Congress state president D K Shivakumar," Siddaramaiah said in a video message. "take into account" a fake letter in his name, which is being circulated on social media. The Congress strongman and Leader of Opposition termed it a "handiwork of mischief mongers of RSS".
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 01:20 pm
Mangalore Correspondent
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm