ಬ್ರೇಕಿಂಗ್ ನ್ಯೂಸ್
17-05-23 01:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ರಾಜ್ಯದ ಮುಖ್ಯಮಂತ್ರಿ ಪಟ್ಟದ ಬಿಕ್ಕಟ್ಟು ಬಹುತೇಕ ಅಂತಿಮಗೊಂಡಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಗಾದಿಗೇರಲು ದೆಹಲಿಯಲ್ಲಿ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆ ಎದುರಿಸುವುದು. ಲೋಕಸಭೆ ಚುನಾವಣೆ ನಂತರವೂ ಒಂದು ವರ್ಷ ಸಿದ್ದರಾಮಯ್ಯ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಶಿಗೆ ಸಿಎಂ ಪಟ್ಟ ನೀಡಲು ಚಿಂತನೆ ನಡೆದಿದೆ. ಡಿಕೆಶಿ ಜೊತೆಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡೆಸಿದ ಸಂಧಾನ ಸಭೆ ಫಲ ನೀಡಿದೆ.
ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಸಂಭ್ರಮ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಮನೆ ಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಸಿದ್ದರಾಮಯ್ಯ ಮನೆಮುಂದೆ ಘೋಷಣೆಗಳನ್ನು ಕೂಗುತ್ತಿದ್ದಾರೆ.
ನಾಳೆಯೇ ಪ್ರಮಾಣವಚನಕ್ಕೆ ಸಿದ್ದತೆ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಸೇರಲಿದ್ದು ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆದಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.
The Congress’ central leadership continues to hold talks to select the new Karnataka Chief Minister, days after a thumping win in the State Assembly elections. State Pradesh Congress Committee president D.K. Shivakumar, one of the claimants tot he top job, arrived in Delhi on May 16 afternoon to hold discussions with the party top brass on the formation of the Congress Government.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm