ಬ್ರೇಕಿಂಗ್ ನ್ಯೂಸ್
22-05-23 12:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ನನಗೆ ಝೀರೋ ಟ್ರಾಫಿಕ್ ಬೇಡ ಎಂದು ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಬೆನ್ನಿಗೇ ಇನ್ನೊಂದು ನಿರ್ಧಾರವನ್ನೂ ಪ್ರಕಟಿಸಿದ್ದಾರೆ.
ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾತ್ರವಲ್ಲ, ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗುತ್ತದೆ ಎಂದಿದ್ದಾರೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದೂ ಸಿಎಂ ಹೇಳಿದ್ದಾರೆ.
ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಅವರು, ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ನೀಡಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು.
ಸಿದ್ದರಾಮಯ್ಯ ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಲವರು ಉತ್ತಮ ನಿರ್ಧಾರ ಎಂದು ಶ್ವಾಘಿಸಿದ್ದಾರೆ.
ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮಾತನ್ನು ಹೇಳಿದ್ದರು. ಹಾರ-ಶಾಲು ಕೊಡುವವರು, ಕೊಡಲೇಬೇಕು ಎಂದುಕೊಂಡವರು ಅದರ ಬದಲು ಪುಸ್ತಕ ಕೊಡಿ ಎಂದು ಹೇಳಿದ್ದರು.
Karnataka Chief Minister Siddaramaiah on Sunday said that he would prefer books over flowers or shawls given by people as a mark of respect at various events.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am