ಬ್ರೇಕಿಂಗ್ ನ್ಯೂಸ್
22-05-23 05:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದು, ಶವವಾಗಿ ಪತ್ತೆಯಾದ ಧಾರುಣ ಘಟನೆ ನಡೆದಿದೆ.
ಯುವಕನೋರ್ವ ರಾಜಕಾಲುವೆಯಲ್ಲಿ ಹುಚ್ಚಾಟ ಆಡಲು ಹೋಗಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. 31 ವರ್ಷದ ಲೋಕೇಶ್ ಎಂಬಾತ ನಿನ್ನೆ ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಹುಚ್ಚಾಟ ಮೆರೆಯಲು ಹೋಗಿದ್ದ. ಕುಡಿದ ಅಮಲಿನಲ್ಲಿ ಈ ರೀತಿ ಮಾಡಲು ಹೋಗಿದ್ದ ಎನ್ನಲಾಗಿದೆ.
ಜೋರು ಮಳೆ ಬರುತ್ತಿದ್ದ ವೇಳೆ ಲೋಕೇಶ್ ರಾಜಕಾಲುವೆಗೆ ಇಳಿದಿದ್ದಾನೆ. ಮಳೆ ಹಿನ್ನೆಲೆ ನೀರಿನ ಆಳ ಎಷ್ಟಿದೆ ಅಂತ ನೋಡಲು ಹೋಗಿದ್ದಾನೆ. ಈ ವೇಳೆ ಸ್ಥಳೀಯರು ಇಳೀಬೇಡ ಎಂದರು ಅವರ ಮಾತಿಗೆ ಕ್ಯಾರೆ ಅನ್ನದೆ ನೀರಿಗೆ ಇಳಿಯಲು ಮುಂದಾಗಿದ್ದಾನೆ. ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಈ ವೇಳೆ ಆತ ಪಾನಮತ್ತನಾಗಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ.
ಲೋಕೇಶ್ ನ ಮೃತದೇಹ ಬ್ಯಾಟರಾಯನಪುರದ ರಾಜಕಾಲುವೆ ಬಳಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಂಭವಿಸಿದ ಎರಡು ಸಾವುಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ ಗಿರಿನಾಥ್, ಗಾಳಿಯ ರಭಸಕ್ಕೆ ಮರದ ಕೊಂಬೆಗಳು ಮತ್ತು ಎಲೆಗಳು ಉರುಳಿಬಿದ್ದು ಚರಂಡಿ ಮುಚ್ಚಿಹೋಗಿದೆ. ಕೇವಲ ಒಂದು ಗಂಟೆಯ ಅವಧಿಯಲ್ಲಿ ಸುಮಾರು 30 ಮಿ.ಮೀ.ನಷ್ಟು ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ ಎಂದು ಗಿರಿನಾಥ್ ಹೇಳಿದರು.
18ನೇ ಅಂಡರ್ಪಾಸ್ ಕುರಿತು ಆಡಿಟ್ ವರದಿ ಸಲ್ಲಿಸುವಂತೆ ಮುಖ್ಯ ಇಂಜಿನಿಯರ್ಗೆ ತಿಳಿಸಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ನಗರದಲ್ಲಿ ಭಾನುವಾರ ಸಂಜೆ 5.30 ರವರೆಗೆ 30 ಮಿಮೀ ಮಳೆ ದಾಖಲಾಗಿದೆ. ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 25.1 ಮಿಮೀ ಮತ್ತು ಕೆಐಎ 8.6 ಮಿಮೀ ಮಳೆ ದಾಖಲಾಗಿದೆ. ಭಾನುವಾರ ರಾತ್ರಿ 8.30ರವರೆಗೆ ನಗರದಲ್ಲಿ 31.4 ಮಿ.ಮೀ ಹಾಗೂ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 26.5 ಮಿ.ಮೀ ಮಳೆ ದಾಖಲಾಗಿದೆ.
Rain horror in Bengaluru, 31 year old man washed away. Rains accompanied by gusty winds on Sunday evening claimed yet another life in KP Agrahara in Bengaluru. A person named Lokesh washed away in a stormwater drain (SWD) and his body was found at another drain in Byatarayanapura, around 12 kilometres away from where he was last spotted.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm