ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am