ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
![]()

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am