ಬ್ರೇಕಿಂಗ್ ನ್ಯೂಸ್
11-06-23 07:02 pm HK News Desk ಕರ್ನಾಟಕ
ಕೋಲಾರ, ಜೂನ್ 11: ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರದಲ್ಲಿ ಕೆಜಿಎಫ್ ಶಾಸಕಿ ಎಂ ರೂಪಕಲಾ ಶಶಿಧರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ಕೋಲಾರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ರೂಪಕಲಾ ಶಶಿಧರ್ ಅವರು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಮಹಿಳೆಯರು ಕುಳಿತಿದ್ದ ಬಸ್ ಚಲಾಯಿಸಿ ಗಮನ ಸೆಳೆದಿದ್ದಾರೆ. ರಾಬರ್ಟ್ಸನ್ ಪೇಟೆಯ ಕುವೆಂಪು ಬಸ್ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಓಡಿಸಿದರು. ಇದಕ್ಕೆ ಬಸ್ ಚಾಲಕ ನೆರವಾಗಿ, ಅವರಿಗೆ ಚಾಲನೆಯ ಸಲಹೆ ನೀಡಿದರು.
ಆರಂಭದಲ್ಲಿ ಗೇರ್ ಸರಿಯಾಗಿ ಬೀಳದೆ ಎರಡು ಬಾರಿ ಬಸ್ ಹಿಮ್ಮುಖವಾಗಿ ಚಲಿಸಿದ್ದು, ಹಿಂಭಾಗದಲ್ಲಿದ್ದ ಮತ್ತೊಂದು ಬಸ್ಗೆ ಡಿಕ್ಕಿಯಾಗುವುದು ತಪ್ಪಿದೆ. ಕೊಂಚ ದೂರ ಬಸ್ ಚಲಾಯಿಸಿದ ಬಳಿಕ ಶಾಸಕಿ ರೂಪಕಲಾ ಶಶಿಧರ್ ಅವರು ಮತ್ತೆ ಸ್ವಲ್ಪ ದೂರ ಬಸ್ನಲ್ಲಿ ಕುಳಿತು ಪ್ರಯಾಣಿಸಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಸ್ಫರ್ಧಿಸಿದ್ದರು. ಈ ಪೈಕಿ ಕೆ.ಎಚ್.ಮುನಿಯಪ್ಪ ಹಾಗೂ ಅವರ ಪುತ್ರಿ ರೂಪಾಕಲಾ ಶಶಿಧರ್ ಕೂಡ ಹೌದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದು ಕೆ.ಎಚ್.ಮುನಿಯಪ್ಪ ಅವರು ಗೆದ್ದು ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರೂ ಆಗಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ರೂಪಾಕಲಾ ಶಶಿಧರ್ ಕೂಡ ಜಯಭೇರಿ ಬಾರಿಸಿದ್ದರು.
ಮಹಿಳೆಯರಿಗೆ ಉಚಿತ ಪ್ರಯಾಣ: ಬಸ್ ಚಲಾಯಿಸಿದ ಕೆಜಿಎಫ್ ಶಾಸಕಿ ರೂಪಕಲಾ #kgf #shaktischeme #roopakala pic.twitter.com/DVzQQ5sLIM
— Prajavani (@prajavani) June 11, 2023
Chief Minister Siddaramaiah today (June 11, Sunday) launched the ambitious Shakti Yojana to provide free bus travel for women, which is one of the 5 guarantees of the Congress. Shakti Yojana was launched by KGF MLA Roopakala Shashidhar in Kolar.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm