ಬ್ರೇಕಿಂಗ್ ನ್ಯೂಸ್
12-06-23 12:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 12: ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ವಿಷ ಅನಿಲ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್ನ ಸುಧಾರಾಣಿ ಮೃತ ದುರ್ವೈವಿಗಳು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಈ ಜೋಡಿ ದುರಂತ ಅಂತ್ಯ ಕಂಡಿದೆ. ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್ ಗೀಸರ್ ಆನ್ ಮಾಡಿ ಬಾತ್ರೂಮ್ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್ರೂಮ್ನ್ಲಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಅಲ್ಲದೇ ಇಬ್ಬರು ಮದುವೆಯಾಗಲು ತಯಾರಿಯಾಗಿದ್ದರು. ಆದ್ರೆ, ಹೊಸ ಜೀವನ ಆರಂಭಿಸಬೇಕೆನ್ನುವಷ್ಟರಲ್ಲೇ ವಿಧಿ ಬಿಟ್ಟಿಲ್ಲ. ಮದುವೆಗೆ ಮುಂಚೆಯೇ ಜೋಡಿ ಮಸಣ ಸೇರಿದೆ.
Couple Bathing together die after Gas leakage from Geyser in Bangalore. The diseased have been identified as Chandrashekhar and Sudharani. It is said that the couple where about to get married in few days. Both were said to be working in Gulf hotel near Nandi Hills in Bangalore.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am