ಬ್ರೇಕಿಂಗ್ ನ್ಯೂಸ್
13-06-23 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 13: ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆದೇಶ ಹೊರಡಿಸುವ ಮೂಲಕ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಕ್ ನೀಡಿದೆ.
ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ನ್ಯಾಯಾಲಯ ಆಘಾತ ನೀಡಿದ್ದು, ರೆಡ್ಡಿ ದಂಪತಿ ಒಡೆತನದ 2009ರ ಜನವರಿ ನಂತರ ಖರೀದಿ ಮಾಡಿದ ಆಸ್ತಿಗಳನ್ನು ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಅರುಣಾ ಲಕ್ಷ್ಮೀ ಹೆಸರಲ್ಲಿ 75ಕ್ಕೂ ಅಧಿಕ ಆಸ್ತಿಗಳಿವೆ. ಬೆಂಗಳೂರು, ಬಳ್ಳಾರಿ ಹಾಗೂ ಆಂಧ್ರದಲ್ಲಿ ರೆಡ್ಡಿ ದಂಪತಿ ಆಸ್ತಿ ಮಾಡಿದ್ದಾರೆ. ಇದೀಗ ರೆಡ್ಡಿ ದಂಪತಿ ಒಡೆತನದ ನೂರಕ್ಕೂ ಅಧಿಕ ಆಸ್ತಿಗಳನ್ನು ಜಪ್ತಿ ಮಾಡುವಂತೆ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಆದೇಶ ಮಾಡಿದ್ದಾರೆ.
ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳಿವೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ವೇಳೆ ಸಿಬಿಐ ಅಧಿಕಾರಿಗಳು ಆಸ್ತಿಗಳನ್ನು ಗುರುತಿಸಿದ್ದರು. ಸಿಬಿಐ ಪರವಾಗಿ ವಿಶೇಷ ಅಭಿಯೋಜಕ ಗೋವಿಂದನ್ ವಾದಿಸಿದ್ದರು.
ಸಿಬಿಐ ನ್ಯಾಯಾಲಯದ ಆದೇಶದಂತೆ, ಆಸ್ತಿಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡರೆ ಆಸ್ತಿಯ ಮೇಲೆ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ ಅವರಿಗೆ ಇರುವ ಎಲ್ಲಾ ಕಾನೂನಾತ್ಮಕ ಹಕ್ಕುಗಳಿಗೆ ತಾತ್ಕಾಲಿಕ ತಡೆ ಬೀಳಲಿದೆ. ಪ್ರಕರಣವು ಇತ್ಯರ್ಥವಾಗುವವರೆಗೂ ಆ ಆಸ್ತಿಗಳ ಮೇಲೆ ಅವರಿಬ್ಬರು ತಮ್ಮ ಹಕ್ಕುಗಳನ್ನು ಚಲಾಯಿಸುವಂತಿರುವುದಿಲ್ಲ. ಆಸ್ತಿಗಳೇನೋ ಅವರ ಹೆಸರಿನಲ್ಲೇ ಮುಂದುವರಿಯುತ್ತವೆ. ಆದರೆ, ಮಾಲೀಕರಾಗಿ ಅವುಗಳನ್ನು ಮಾರಾಟ ಮಾಡುವುದು, ಅವುಗಳಿಂದ ಬಾಡಿಗೆ ಇತ್ಯಾದಿ ಲಾಭಗಳನ್ನು ಮಾಡಿಕೊಳ್ಳುವುದು ಇತ್ಯಾದಿ ಯಾವುದೇ ರೀತಿಯ ಪ್ರಯೋಜನಗಳನ್ನು ರೆಡ್ಡಿ ಹಾಗೂ ಅವರ ಕುಟುಂಬ ಪಡೆಯುವ ಹಾಗಿರುವುದಿಲ್ಲ.
ಸಿಬಿಐ ನ್ಯಾಯಾಲಯವು 77 ಆಸ್ತಿಗಳನ್ನು ಮುುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿದೆಯಾದರೂ, ಈ ಆದೇಶದ ವಿರುದ್ಧ ಕಾನೂನು ಹೋರಾಟ ಮಾಡಲು ಜನಾರ್ದನ ರೆಡ್ಡಿಯವರಿಗೆ ಅವಕಾಶವಿದೆ ಎಂದು ಮೂಲಗಳು ಹೇಳಿವೆ. ಸಿಬಿಐ ನ್ಯಾಯಾಲಯದಲ್ಲೇ ಈ ತೀರ್ಪಿನ ಮರುಪರಿಶೀಲನೆಗೆ ಅರ್ಜಿ ಹಾಕಬಹುದು, ಇಲ್ಲವೇ ಅವರು ಸಿಬಿಐ ನ್ಯಾಯಾಲಯಕ್ಕಿಂತ ಉನ್ನತ ಮಟ್ಟದ ನ್ಯಾಯಾಲಯಗಳಲ್ಲಿ ಇದನ್ನು ಪ್ರಶ್ನೆ ಮಾಡಬಹುದಾಗಿದೆ.
In a setback to mining baron-turned-politician Gali Janardhana Reddy, a CBI court on Tuesday ordered the seizure of his properties and also those in the name of his wife Gali Aruna Laxmi until criminal cases against them are disposed off. The CBI had submitted a petition before the court seeking seizure of 124 properties belonging to the couple.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm