ಬ್ರೇಕಿಂಗ್ ನ್ಯೂಸ್
14-06-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ವಿಧಾನಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿ ಹೈಕಮಾಂಡ್ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂದು ಹೇಳಿರುವ ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಮಾತಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ. ಈಗ ಯಾರನ್ನು ನೇಣಿಗೆ ಹಾಕುವಿರಿ? ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ. 'ಅಮಿತ್ ಷಾರವರನ್ನೋ? ಬಿ.ಎಲ್ ಸಂತೋಷರನ್ನೋ ? ಪ್ರಹ್ಲಾದ್ ಜೋಶಿಯವರನ್ನೋ ? ಮೋದಿಯವರನ್ನೋ? ಬೊಮ್ಮಾಯಿಯವರನ್ನೋ? ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು? ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ?' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ, ಬೊಮ್ಮಾಯಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಟಾರ್ಗೆಟ್ ಮಾಡುತ್ತಿರುವ ಪ್ರತಾಪ್ ಸಿಂಹ ಹಾಗೂ ಸಿ.ಟಿ ರವಿ ಅವರ ಹೇಳಿಕೆಗಳ ಹಿಂದಿರುವುದು ಮತ್ತದೇ ಜೋಶಿ, ಸಂತೋಷ್ ಜೋಡಿ. ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ.
ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋದನಕ್ಕೆ ಪ್ರತಾಪ್ ಸಿಂಹ ದನಿ ಜೋಡಿಸಿದ್ದಾರೆ. ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ. ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ಎಂದು ಟ್ವೀಟ್ ಮಾಡಿದೆ.
ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ.
— Karnataka Congress (@INCKarnataka) June 14, 2023
ಈಗ ಯಾರನ್ನು ನೇಣಿಗೆ ಹಾಕುವಿರಿ @BJP4Karnataka?
ಅಮಿತ್ ಷಾರವರನ್ನೋ?
ಬಿ ಎಲ್ ಸಂತೋಷರನ್ನೊ?
ಪ್ರಹ್ಲಾದ್ ಜೋಶಿಯವರನ್ನೋ ?
ಮೋದಿಯವರನ್ನೋ?
ಬೊಮ್ಮಾಯಿಯವರನ್ನೋ?
ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು?
ಬಿಜೆಪಿಯಿಂದ ಉತ್ತರ… pic.twitter.com/siPebUNZia
Vijayapura MP Ramesh Jigajinagi wants BJP to hang leaders who denied tickets to Seniors, Congress slams on Twitter asking who is the first leader to be hanged. A statement by Ramesh Jigajinagi, MP from Vijayapura, implying that some of BJP leaders were responsible for the party’s debacle in the Karnataka Assembly elections, has created a controversy
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm