ಬ್ರೇಕಿಂಗ್ ನ್ಯೂಸ್
14-06-23 07:33 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಕಾಂಗ್ರೆಸ್ ವಿರುದ್ಧ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದು ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? 135 ಸೀಟು ಪಡೆದಿದ್ದೇವೆಂದು ಕಾಂಗ್ರೆಸ್ ಅಮಲಿನಲ್ಲಿ ತೇಲುತ್ತಿದೆ ಎಂದು ಮೊನಚು ಮಾತುಗಳಿಂದ ತಿವಿದಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಖರ್ಗೆ, ಪರಮೇಶ್ವರ್ ಸೋಲಿಸಲು ಹೂಡಿದ ತಂತ್ರ, ಆಡಿದ ಸದಾರಮೆ ಆಟಗಳ ಬಗ್ಗೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಧೈರ್ಯ ಕಾಂಗ್ರೆಸ್ ಗೆ ಇದೆಯೇ ಎಂದು ಪ್ರಶ್ನೆ ಮಾಡಿದೆ.
135 ಸೀಟುಗಳ ಅಮಲಿನಲ್ಲಿ ತೇಲುತ್ತಿರುವ ಕಾಂಗ್ರೆಸ್ ಪಕ್ಷ, 'ಕೋತಿ ಮೊಸರನ್ನ ತಿಂದು ಮೇಕೆ ಮೂತಿಗೆ ಒರೆಸಿತು' ಎಂಬಂತೆ ಹುಚ್ಚಾಟ ಆಡುತ್ತಿದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಕಂಡ ಅತಿ ಅಪಮಾನಕರ ಸೋಲನ್ನು ಮರೆತು, ಈಗ ಜಗತ್ತನ್ನೇ ಗೆದ್ದೆ ಎಂದು ಗದೆ ತಿರುಗಿಸುತ್ತಿರುವುದು ವಿಕೃತಿಯ ಪರಮಾವಧಿ. ಜಾತಿ, ಧರ್ಮ ಒಡೆದು, ಮನಸ್ಸುಗಳ ನಡುವೆ ದ್ವೇಷದ ಬೆಂಕಿ ಬಿತ್ತಿ, ಪರಸ್ಪರ ವ್ಯವಹಾರದ ಪರಿಣಾಮವೇ ಈ 135 ಸೀಟು. ಶಿಗ್ಗಾಂವಿ, ವರುಣಾ, ಶಿಕಾರಿಪುರ, ಚಿಕ್ಕಮಗಳೂರು, ಕನಕಪುರ ಕ್ಷೇತ್ರ ಸೇರಿ ಆಯ್ದ ಜಿಲ್ಲೆಗಳಲ್ಲಿ ನಡೆದ ಅಡ್ಜಸ್ಟ್ ಮೆಂಟ್ ಆಟ ಎರಡೂ ರಾಷ್ಟ್ರೀಯ ಪಕ್ಷಗಳ ನೀತಿಗೆಟ್ಟ ರಾಜಕಾರಣಕ್ಕೆ ಹಿಡಿದ ಕನ್ನಡಿ ಎಂದು ಕಿಡಿಕಾರಿದೆ.
ಅಲ್ಲದೆ, ಬಿಜೆಪಿಯ ಸಿಟಿ ರವಿ, ಸಂಸದ ಪ್ರತಾಪ್ ಸಿಂಹ, ಡಾ.ಜಿ ಪರಮೇಶ್ವರ್ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರ ಕೊಡುವ ದಮ್ಮು, ತಾಕತ್ತು ಮುಖ ಮೂತಿಗೆಲ್ಲ ಒಳ ರಾಜಕೀಯದ ಗಲೀಜು ಮೆತ್ತಿಕೊಂಡ ಎರಡೂ ಪಕ್ಷಗಳ ನಾಯಕರಿಗೆ ಇದೆಯಾ? ಹಗಲಲ್ಲಿ ಹಾರಾಟ, ಕತ್ತಲಾದರೆ ಕಳ್ಳಾಟ!! ಕಾರ್ಯಕರ್ತರೇ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಮಂಡ್ಯ ಜಿಲ್ಲೆ ಒಂದರಲ್ಲಿಯೇ ಪ್ರತಿ ಕ್ಷೇತ್ರಕ್ಕೆ ಕಮ್ಮಿ ಎಂದರೂ 10-20 ಕೋಟಿ ವ್ಯಯಿಸಿ ಮತ ವಿಭಜನೆ ಮಾಡಿದ್ದು ಯಾರು? ಒಬ್ಬರನ್ನು ಒಬ್ಬರು ಮೀರಿಸುವಂತೆ ಹಣದ ಹೊಳೆ ಹರಿಸಿದ್ದು ಯಾರು? ಪ್ರಾದೇಶಿಕ ಪಕ್ಷದ ಕತ್ತು ಕೊಯ್ಯಲು ನೀಚ, ನಿಕೃಷ್ಟ ರಾಜಕೀಯ ಮಾಡಿದ್ದು ಯಾರು? ಈಗ ನೀವೇ ಸತ್ಯ ಹೇಳುತ್ತಿದ್ದೀರಿ, ಸತ್ಯದ ಕತ್ತು ಕೊಯ್ಯುವುದು ಸಾಧ್ಯವೇ? ಎಂದು ಜೆಡಿಎಸ್ ಕಿಡಿಕಾರಿದೆ.
ಅಂತೆಯೇ, 'ಅಡ್ಜಸ್ಟ್ ಮೆಂಟ್ ಇಲ್ಲದಿದ್ದರೆ ಕಳೆದ ಬಾರಿ ಡಾ.ಜಿ.ಪರಮೇಶ್ವರ ಅವರು ಕೊರಟಗೆರೆಯಲ್ಲಿ, ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರ್ಗಿಯಲ್ಲಿ ಸೋತಿದ್ದೇಕೆ? ದಲಿತೋದ್ಧಾರ, ಆಹಿಂದೋದ್ಧಾರ ಎನ್ನುವರು, ಈ ಇಬ್ಬರನ್ನು ಸೋಲಿಸಲು ಹೂಡಿದ ತಂತ್ರಗಳ ಬಗ್ಗೆ, ಆಡಿದ ಸದಾರಮೆ ಆಟಗಳ ಬಗ್ಗೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಧೈರ್ಯ ಈ ಕಾಂಗ್ರೆಸ್ ಗೆ ಇದೆಯಾ? ಆಪರೇಶನ್ ಕಮಲ; ಇಬ್ಬರು ನಾಯಕರ ಜಂಟಿ ಆಪರೇಶನ್ ಎನ್ನುವುದು ಯಾರಿಗೆ ಗೊತ್ತಿಲ್ಲ? ಇದರ ಅಸಲಿ ಕಥೆ ಗೊತ್ತಿಲ್ಲದಷ್ಟು ಮುಗ್ಧರಾ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು? ಆ ಹೇಸಿಗೆಯಲ್ಲಿ ಬಿದ್ದು ಹೊರಳುತ್ತಿರುವ ಕಾಂಗ್ರೆಸ್ ಆ ಗಲೀಜನ್ನೆಲ್ಲ ಮುಖಕ್ಕೆ ಮೆತ್ತಿಕೊಂಡು ಇತರರಿಗೂ ಮೆತ್ತಲು ಹವಣಿಸುತ್ತಿದೆ! ಛೇ, ಅಸಹ್ಯ!! ವಿಕೃತಿ ವಿನಾಶಕ್ಕೆ ದಾರಿ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
135 ಸೀಟುಗಳ ಅಮಲಿನಲ್ಲಿ ತೇಲುತ್ತಿರುವ @INCKarnataka ಪಕ್ಷ, 'ಕೋತಿ ಮೊಸರನ್ನ ತಿಂದು ಮೇಕೆ ಮೂತಿಗೆ ಒರೆಸಿತು' ಎಂಬಂತೆ ಹುಚ್ಚಾಟ ಆಡುತ್ತಿದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಕಂಡ ಅತಿ ಅಪಮಾನಕರ ಸೋಲನ್ನು ಮರೆತು,ಈಗ ಜಗತ್ತನ್ನೇ ಗೆದ್ದೆ ಎಂದು ಗದೆ ತಿರುಗಿಸುತ್ತಿರುವುದು ವಿಕೃತಿಯ ಪರಮಾವಧಿ.1/6#ಬಿಜೆಪಿ_ಕಾಂಗ್ರೆಸ್_ಭಾಯಿ_ಭಾಯಿ
— Janata Dal Secular (@JanataDal_S) June 14, 2023
HD Kumaraswamy Slams Congress government over adjustment politics, Karghe planned for Parmeshwars defeat.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm