ಬ್ರೇಕಿಂಗ್ ನ್ಯೂಸ್
22-06-23 01:54 pm HK News Desk ಕರ್ನಾಟಕ
ಹಾಸನ, ಜೂ 22: ಬಾಡಿಗೆದಾರರ ಕಾಟಕ್ಕೆ ಪ್ರಾಣ ಬಿಟ್ಟ ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಘಟನೆ ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಲಲಿತಾ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈ ಸುದ್ದಿ ಕೇಳಿ ಲಕ್ಷಮ್ಮ (75) ಆಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
ಲಲಿತಾ ಹಾಗೂ ಪತಿ ನಾಗರಾಜ ದಾಸರಕೊಪ್ಪಲು ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಮನೆಯ ಮೇಲ್ಭಾಗದ ಮನೆಗಳನ್ನು ಬಾಡಿಗೆ ಮತ್ತು ಲೀಸ್ ಗೆ ನೀಡಿದ್ದರು. ಎರಡು ವರ್ಷದ ಹಿಂದೆ ಮೊದಲ ಮಹಡಿಯ ಮನೆಯನ್ನು ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ ಹಾಗೂ ನಟರಾಜ ದಂಪತಿಗೆ ಮನೆ ಲೀಸ್ ಗೆ ಕೊಟ್ಟಿದ್ರು. ಹೊಸ ಮನೆಗೆ ಬಂದ ಒಂದು ವರ್ಷದ ನಂತರ ನಟರಾಜ ದಂಪತಿ ವಿನಾಃ ಕಾರಣ ಲಲಿತಾ ಅವರೊಂದಿಗೆ ಜಗಳ ಮಾಡುತ್ತಿದ್ದರು. ಒಮ್ಮೆ ನಾಗರಾಜ ಮತ್ತು ಲಲಿತಾ ಅವರ ಮೇಲೆ ಸುಧಾರಾಣಿ ಮತ್ತು ನಟರಾಜ ಹಲ್ಲೆಗೆ ಮುಂದಾಗಿದ್ದರು. ಜೂ.16 ರಂದು ಸರ ಕದ್ದಿದ್ದೀಯಾ, ನೀನು ಕಳ್ಳಿ ಎಂದು ಜಗಳ ತೆಗೆದು ಲಲಿತಾಗೆ ಬಾಯಿಗೆ ಬಂದಂತೆ ಬೈದಿದ್ದಾಳೆ . ಇದರಿಂದ ಬೇಸರಗೊಂಡು ಲಲಿತಾ ಮನೆ ಬಿಟ್ಟು ಹೋಗಿದ್ದರು. ನಂತರ ಜೂ.17 ರಂದು ಬೆಳಿಗ್ಗೆ ನಂಜದೇವರಕಾವಲು ಗ್ರಾಮದ ಅವರ ಜಮೀನಿನಲ್ಲಿ ವಿಷ ಕುಡಿದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ನಾಗರಾಜ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.20 ರಂದು ರಾತ್ರಿ ಲಲಿತಾ ಸಾವನಪ್ಪಿದ್ದಾರೆ. ಮಗಳ ಸಾವನ್ನಪ್ಪಿದ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಡಿಗೆದಾರ ನಟರಾಜ್ ಮತ್ತು ಸುಧಾರಣೆಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Hassan House owner commits suicide due to harassment by tenant, mother too dies after hearing shocking news of daughter.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am