ಬ್ರೇಕಿಂಗ್ ನ್ಯೂಸ್
25-06-23 01:49 pm HK News Desk ಕರ್ನಾಟಕ
ಕಾರವಾರ, ಜೂನ್ 25: ಕಳ್ಳತನ ಪ್ರಕರಣದ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಕೈದಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಹೊನ್ನಾವರ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜತೆ ಪಟ್ಟಣದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆಯ ಹಂತದಲ್ಲಿರುವಾಗ ಆರೋಪಿತ ನೀರು ಕುಡಿಯುತ್ತೇನೆ ಎಂದು ಬ್ಯಾಗ್ನಲ್ಲಿ ತಂದಿದ್ದ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐವರು ಪೊಲೀಸರು ಅಮಾನತು:
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಮಂಗಳೂರು ವಲಯದ ಐಜಿ ಚಂದ್ರಗುಪ್ತ ಸುದೀರ್ಘ ಎರಡು ಗಂಟೆಯ ವಿಚಾರಣೆಯ ಬಳಿಕ ಸಿಪಿಐ ಮಂಜುನಾಥ ಇ.ಒ, ಪಿಎಸ್ಐ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ ಹಾಗೂ ಮಹಾವೀರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ. ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.
Five police personnel have been placed under suspension after a man allegedly committed suicide while in the custody of the Honnavar police. He committed suicide by consuming poison in the police station.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am