ಬ್ರೇಕಿಂಗ್ ನ್ಯೂಸ್
27-06-23 03:15 pm HK News Desk ಕರ್ನಾಟಕ
ಮೈಸೂರು, ಜೂನ್ 27: ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆಯಿದ್ದ ಕಾರಣ ಅರೆಕಾಲಿಕ ವೈದ್ಯರಿಗೆ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಸದ ಪ್ರತಾಪ ಸಿಂಹ ಸ್ವಾಗತಿಸಿದರು. ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರದ ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಬಗ್ಗೆ ಚಾರ್ಜ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಜ್ ಫ್ರೇಮನ್ನು ಸಿದ್ಧ ಮಾಡುತ್ತಿದ್ದೇವೆ. ಚಾರ್ಜ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ. ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಕಾಲ ಮಿತಿಯ ಒಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದರು.
ಕಾಂಗ್ರೆಸಿನಿಂದ ಬಂದವರಿಂದ ಬಿಜೆಪಿ ಶಿಸ್ತು ಕೆಟ್ಟಿತ್ತು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ 40, 50% ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದರು.
Health Minister Dinesh Gundu Rao seeks re probe into Chamarajanagar oxygen tragedy. Chamarajanagar District Hospital tragedy where shortage of oxygen killed 36 people in 2021 during the peak of Covid. He told The New Indian Express that he has sought a re-investigation as the report submitted by the BJP government is not satisfactory.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am