ಬ್ರೇಕಿಂಗ್ ನ್ಯೂಸ್
02-11-20 02:16 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 02: ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ನಿರಂತರ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.
ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಾಕ್ಷಿ. ನಳಿನ್ ಒಬ್ಬ ಕಾಮಿಡಿ ಆಕ್ಟರ್. ಇವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ. ಸಿದ್ದರಾಮಯ್ಯರಿಗೆ ಕಾಂಗ್ರೆಸ್ ನಲ್ಲಿ ಬೆಲೆ ಇಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ. ಆದರೆ ಸರ್ವ ಜನಾಂಗದ ನಾಯಕ, ಹಣಕಾಸು ತಜ್ಞ, 168 ಯೋಜನೆಗಳನ್ನು ಘೋಷಿಸಿ ಜಾರಿಗೊಳಿಸಿ ನುಡಿದಂತೆ ನಡೆದ ನಾಯಕ ಸಿದ್ದರಾಮಯ್ಯ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.
ಒಂದು ಪಂಪ್ ವೆಲ್ ಮೇಲ್ಸೇತುವೆಯನ್ನು ಸಮಯಕ್ಕೆ ಮುಗಿಸಲಾಗದ ನಳಿನ್ ಕುಮಾರ್ ಕಟೀಲು ಅವರಿಗೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ನಮ್ಮ ಪ್ರತಿ ಕಾರ್ಯಕರ್ತರಲ್ಲೂ ಸಿದ್ದರಾಮಯ್ಯನವರ ಬಗ್ಗೆ ಗೌರವವಿದೆ ಎಂದಿರುವ ಕಾಂಗ್ರೆಸ್, ನಳಿನ್ ಕುಮಾರ್ ಅವರಿಗೆ, ಪದೇ ಪದೇ ಸಿಎಂ ಬಗ್ಗೆ ಅವಹೇಳನ ಮಾಡುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕನಿಷ್ಠ ನೋಟಿಸನ್ನೂ ಕೊಡುವ ಧೈರ್ಯ ಇಲ್ಲ. ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮುಖ್ಯಮಂತ್ರಿಯ ಭೇಟಿಗೆ ಸಮಯ ಕೊಡದಿದ್ದಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ ಎಂದು ಸೂಚಿಸುತ್ತದೆ. ಪಕ್ಷ ಕಟ್ಟಿದ ಅವರನ್ನ ಚೆನ್ನಾಗಿ ನೋಡಿಕೊಳ್ಳಿ ಎಂದು ಕಾಂಗ್ರೆಸ್ ಸಲಹೆ ನೀಡಿದೆ.
ನಳಿನ್ ಕುಮಾರ್ ಕಟೀಲು ತಮ್ಮ ನಡೆ-ನುಡಿ ಮೂಲಕ ತಾನೊಬ್ಬ ಅಪ್ರಬುದ್ಧ, ಅನಾಗರಿಕ, ಸಡಿಲ ನಾಲಿಗೆಯ ಯಕಶ್ಚಿತ್ ರಾಜಕಾರಣಿ ಎಂದು ಸಾಬೀತು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು. ಅವರು ಇದೇ ರೀತಿ ಮಾತನಾಡುತ್ತಾ ಬಿಜೆಪಿಯ ಬಣ್ಣ ಬಯಲು ಮಾಡುತ್ತಲೇ ಇರಲಿ ಎಂದು ಟ್ವೀಟ್ ಮೂಲಕ ಕಿಡಿಕಾರಿದೆ.
ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ..? ಏನಾಗುತ್ತದೆ ಎನ್ನುವ ಗಾದೆಗೆ @BJP4Karnataka ರಾಜ್ಯಾಧ್ಯಕ್ಷ
— Karnataka Congress (@INCKarnataka) November 2, 2020
ಕಾಮಿಡಿ ಆಕ್ಟರ್ @nalinkateel ಸಾಕ್ಷಿ,
ಇವರ ಮಾತಲ್ಲಿ ಘನತೆ,ಗೌರವ, ಬದ್ಧತೆ, ಯಾವುದೂ ಇಲ್ಲ.
ಸರ್ವಜನಾಂಗದ ನಾಯಕ, ಹಣಕಾಸು ತಜ್ಞ,168 ಯೋಜನೆಗಳನ್ನ ಘೋಷಿಸಿ ಜಾರಿಗೊಳಿಸಿ ನುಡಿದಂತೆ ನೆಡೆದ ನಾಯಕ @siddaramaiah pic.twitter.com/hTKRtg9MHe
.@nalinkateel ತಮ್ಮ ನಡೆ-ನುಡಿ ಮೂಲಕ ತಾನೊಬ್ಬ ಅಪ್ರಬುದ್ಧ, ಅನಾಗರಿಕ, ಸಡಿಲ ನಾಲಿಗೆಯ ಯಕಶ್ಚಿತ್ ರಾಜಕಾರಣಿ ಎಂದು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ,@BJP4Karnatakaಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು. ಅವರು ಇದೇ ರೀತಿ ಮಾತನಾಡುತ್ತಾ ಬಿಜೆಪಿಯ ಬಣ್ಣ ಬಯಲು ಮಾಡುತ್ತಲೇ ಇರಲಿ.4/4
— Karnataka Congress (@INCKarnataka) November 2, 2020
Congress slams BJP State President Naleen Kumar Kateel as a comedy actor on it's Twitter page.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm