ಬ್ರೇಕಿಂಗ್ ನ್ಯೂಸ್
30-06-23 10:09 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 30: ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ರಾಜ್ಯ ಬಿಜೆಪಿಯನ್ನು ಕೆಣಕಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆ ನಾಯಕನ ಹೆಸರು ಹೇಳಲಿ! ಬಿಜೆಪಿ ಈಗ ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದೆಯೋ ಆತ್ಮಹತ್ಯೆ ವಿಮರ್ಶೆ ಮಾಡಿಕೊಳ್ಳುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ! ಎಂದು ಲೇವಡಿ ಮಾಡಿದೆ.
ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ. ಬಂಧನದಿಂದ ಹೊರಬರಬೇಕು ಎಂದರೆ ಆ "ಪಂಚೆ"ಯನ್ನು ಹರಿಯಲೇಬೇಕು! ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ 'ಸಂಘ'ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು ಎಂದು ಸಂತೋಷ್ ಹೆಸರೇಳದೆ ಕಾಂಗ್ರೆಸ್ ಕೆಣಕಿದೆ.
ಬಿಜೆಪಿಯ ಸೋಲಿನ ಆತ್ಮಾವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ, ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು! ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ!
ರಾಜ್ಯಾಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯ ಪಡುತ್ತಿರುವುದೇಕೆ? ಎಂದು ಪ್ರಶ್ನೆ ಮಾಡಿದೆ.
ಇತಿಹಾಸದಲ್ಲಿ ಮೊದಲ ಬಾರಿಗೆ ಆರೆಎಸ್ಎಸ್ ನವರ ಲಾಠಿ ಉಪಯೋಗಕ್ಕೆ ಬರಲಿದೆ, ಸದ್ಯದ ಸ್ಥಿತಿಯಲ್ಲಿ ಬಿಜೆಪಿಗರ ಕೈಗೆ ಕೊಟ್ಟರೆ ಬಡಿದಾಡಿಕೊಳ್ಳಲು ಬಳಸುತ್ತಾರೆ. ಆ ನಂತರ ಬದುಕುಳಿದವರಿಗೆ ಅಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ ಕೊಟ್ಟು ಕೂರಿಸಬಹುದು, ಆರ್ಎಸ್ಎಸ್ ನಾಯಕರಿಗೆ ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ ಫ್ರಿಯಾಗಿ ನೀಡುತ್ತಿದ್ದೇವೆ! ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.
ಬಿಜೆಪಿಯ ‘ಫಟಿಂಗ ಪಂಚೆ‘ಯ ವಿರುದ್ಧ ಮಾತನಾಡಿದ್ದೇ ತಡ ರೇಣುಕಾಚಾರ್ಯರಿಗೆ 24 ಗಂಟೆಯೊಳಗೆ ನೋಟಿಸ್ ಜಾರಿಯಾಗಿದೆ. ಆದರೆ ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದು ಬಹಿರಂಗವಾಗಿಲ್ಲ, ನೋಟಿಸ್ ತೋರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ್ದಾರೆ ಯತ್ನಾಳ್. ಪಂಚೆ ಪಡೆಯ ಮಾತುಗಳು ಪಕ್ಷ ವಿರೋಧಿ ಎಸಿಕೊಳ್ಳುವುದಿಲ್ಲವೇ?
ಚುನಾವಣೆ ಮುಗಿದ ನಂತರವೂ BSY ಬ್ರಿಗೇಡ್ ನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ ನಳಿನ್ ಅವರೇ.. ಡಿಯರ್ ಬಿಜೆಪಿಯವರೇ ನೋಟಿಸ್ ಬಹಿರಂಗಪಡಿಸಿ 10 ಲಕ್ಷ ಬಹುಮಾನ ಪಡೆಯಿರಿ! ಎಂದು ಕಾಲೆಳೆದಿದೆ.
ಬಿಜೆಪಿಯ ‘ಫಟಿಂಗ ಪಂಚೆ‘ಯ ವಿರುದ್ಧ ಮಾತನಾಡಿದ್ದೇ ತಡ ರೇಣುಕಾಚಾರ್ಯರಿಗೆ 24 ಗಂಟೆಯೊಳಗೆ ನೋಟಿಸ್ ಜಾರಿಯಾಗಿದೆ.
— Karnataka Congress (@INCKarnataka) June 30, 2023
ಆದರೆ ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದು ಬಹಿರಂಗವಾಗಿಲ್ಲ, ನೋಟಿಸ್ ತೋರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ್ದಾರೆ ಯತ್ನಾಳ್.
ಪಂಚೆ ಪಡೆಯ ಮಾತುಗಳು ಪಕ್ಷ ವಿರೋಧಿ ಎಸಿಕೊಳ್ಳುವುದಿಲ್ಲವೇ?
ಚುನಾವಣೆ ಮುಗಿದ ನಂತರವೂ BSY…
Congress slams BJP on twitter on remarks of Renukacharyas statement, says BJP is stuck inside Doti.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 04:11 pm
HK News Desk
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 03:30 pm
Mangalore Correspondent
Moral policing, Puttur, Mangalore Crime: ನೀನು...
07-07-25 12:20 pm
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm