ಬ್ರೇಕಿಂಗ್ ನ್ಯೂಸ್
28-07-23 06:11 pm HK News Desk ಕರ್ನಾಟಕ
ಮೈಸೂರು, ಜುಲೈ 28: ಟ್ರಯಲ್ಗೆ ತೆಗೆದುಕೊಂಡು ಹೋದ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತ ಸ್ಥಳದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆಕೆಂಡ್ ಹ್ಯಾಂಡ್ ಇನ್ನೋವಾ ಕಾರು ಕೊಂಡುಕೊಳ್ಳಲೆಂದು, ಟ್ರಯಲ್ ನೋಡುವುದಾಗಿ ಹೇಳಿ ಅಶೋಕಪುರಂ ನಿವಾಸಿ ರವಿ ಕುಮಾರ್ ಎಂಬವರು ಕಾರು ತೆಗೆದುಕೊಂಡು ಹೋಗಿದ್ದರು. ಆ ಕಾರಿನಲ್ಲಿ ಅವರ ಜೊತೆ ಭಾಸ್ಕರ್, ರವಿ, ಸಂದೇಶ್ ಹಾಗೂ ಶಿವಕುಮಾರ್ ಎಂಬವರು ತೆರಳಿದ್ದರು. ಕಾರು ಮಾನಂದವಾಡಿ ರಸ್ತೆಯ ಬಳಿ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದ್ದು, ಆನಂತರ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ವಿದ್ಯುತ್ ತಂತಿ ಕಾರಿಗೆ ತಗುಲಿದೆ.
ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಡ್ರೈವರ್ ಕಿರಣ್ ಇವರ ಸಹಾಯಕ್ಕೆ ಬಂದಿದ್ದಾರೆ. ತುಂಡಾದ ವಿದ್ಯುತ್ ತಂತಿ ತಾಗಿ ರವಿ ಕುಮಾರ್ ಹಾಗೂ ಸಹಾಯ ಮಾಡಲು ಬಂದ ಕಿರಣ್ ಇಬ್ಬರೂ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರವಿ, ಸಂದೇಶ್, ಶಿವಕುಮಾರ್ ಅವರಿಗೂ ಶಾಕ್ ಹೊಡೆದಿದೆ. ಮತ್ತೊಬ್ಬ ಭಾಸ್ಕರ್ ಎಂಬವರು ಅದೃಷ್ಟವಶಾತ್ ಆಪಾಯದಿಂದ ಪಾರಾಗಿದ್ದಾರೆ.

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಸಹೋದರಿಯ ಮಗ ದೀರಜ್ ಪ್ರಸಾದ್ಗೆ ಸೇರಿದ ಕಾರು ಅಪಘಾತವಾಗಿತ್ತು. ಬಳಿಕ ಅಪಘಾತವಾದ ಸ್ಥಳದಿಂದ ಕಾರನ್ನು ತಳ್ಳಲು ಕಾರಿನಲ್ಲಿದ್ದ ನಾಲ್ವರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಅಲ್ಲೇ ಇದ್ದ ಆಟೋ ಚಾಲಕ ರವಿನನ್ನು ಸಹಾಯಕ್ಕೆ ಬರುವಂತೆ ಕರೆದಿದ್ದಾರೆ. ಅದರಂತೆ ರವಿ ನೆರವಿಗೆ ಧಾವಿಸಿದ್ದು, ಎಲ್ಲರೂ ಸೇರಿ ತಳ್ಳುವಾಗ ಕಾರಿನಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿದೆ. ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ಕಿರಣ್ ಹಾಗೂ ಸಹಾಯಕ್ಕೆ ಬಂದಿದ್ದ ಆಟೋ ಚಾಲಕ ರವಿ ಸಾವನ್ನಪ್ಪಿದ್ದಾರೆ.
ಇವರೆಲ್ಲ ಕಡು ಬಡತನದಲ್ಲಿ ಇರುವವರು. ಕೆಪಿಟಿಸಿಎಲ್ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಮೃತರ ಸಂಬಂಧಿಕರು ಒತ್ತಾಯ ಮಾಡಿದ್ದಾರೆ.
ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Mysuru accident, Second hand test drive car rams on electric Police, two killed on spot including auto driver who rushed to help.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am