ಬ್ರೇಕಿಂಗ್ ನ್ಯೂಸ್
29-07-23 06:34 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು.
ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐ ಆರ್ ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.
ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯ ವಿಡಿಯೋ ಚಿತ್ರೀಕರಣ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಉಡುಪಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆದರೆ ಶೌಚಾಲಯದಲ್ಲಿ ಗುಪ್ತ ಕ್ಯಾಮೆರಾವನ್ನು ಅಳವಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಮತ್ತೊಂದು ಕಡೆಯಲ್ಲಿ ಉಡುಪಿ ಘಟನೆಯನ್ನು ಎನ್ಐಎಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಜುಲೈ 18ರಂದು ಘಟನೆ ಬೆಳಕಿಗೆ ಬಂದಿದೆ. ಬಿಜೆಪಿ ಪ್ರತಿಭಟನೆ ಬಳಿಕ 26ರಂದು ಎಫ್ಐಆರ್ ಮಾಡಿದ್ದಾರೆ. ಅಗೆದಷ್ಟೂ ವಿಚಾರ ಆಳಕ್ಕೆ ಹೋಗುತ್ತಿದೆ. ಈ ಥರದ ಘಟನೆ ಆರೇಳು ತಿಂಗಳಿಂದ ನಡೆಯುತ್ತಿದೆ ಎಂದು ಕಾಲೇಜು ವಿದ್ಯಾರ್ಥಿನಿಯರೇ ಹೇಳುತ್ತಿದ್ದಾರೆ. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ಆರೋಪಿಸಿದರು. ಅದು ಪಿಎಫ್ಐ ಇದೆಯೋ, ಜಿಹಾದಿ ಸಂಘಟನೆಗಳಿವೆಯೇ?- ಇದರ ಬಗ್ಗೆ ತನಿಖೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಆಗ್ರಹಿಸಿದ್ದಾರೆ.
ವಿಡಿಯೋ ರೆಕಾರ್ಡ್ ಆದ ಮೊಬೈಲನ್ನು ಹುಡುಗರು ಒಯ್ಯುತ್ತಿದ್ದರೆಂಬ ಮಾಹಿತಿ ಸಿಕ್ಕಿದೆ. ವಿಡಿಯೋ ಪಡೆಯಲು ಬರುತ್ತಿದ್ದ ಹುಡುಗರು ಯಾರು? ಪಿಎಫ್ಐ ಜಾಲದ ಅನೇಕ ಮಹಿಳೆಯರೂ ಇದರಲ್ಲಿ ಇರುವುದಾಗಿ ಗೊತ್ತಾಗುತ್ತಿದೆ. ಸಮಗ್ರ ತನಿಖೆಗಾಗಿ ಎನ್ಐಎಗೆ ಕೊಡಿ ಎಂಬುವುದು ಬಿಜೆಪಿ ವಾದವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೆಣಗಳ ಮೇಲೆ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
Udupi college video case, CM Siddaramaiah slams BJP with his first reaction, Says we will take action as FIR has bern lodged.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm