ಬ್ರೇಕಿಂಗ್ ನ್ಯೂಸ್
29-07-23 08:03 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಹೈಕಮಾಂಡ್ ಹೊಸ ತಂಡವನ್ನು ರಚಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ರಚಿಸಲಾದ ತಂಡಕ್ಕೆ ಹೊಸತಾಗಿ ರಾಷ್ಟ್ರೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದಿಂದ ಏಕೈಕ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿಟಿ ರವಿ ಅವರನ್ನು ಕೈಬಿಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೊಸ ತಂಡದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸ್ಥಾನದಲ್ಲಿ ಬಿಎಲ್ ಸಂತೋಷ್ ಅವರನ್ನು ಮುಂದುವರಿಸಲಾಗಿದೆ. ಅವರನ್ನು ಹೊರತುಪಡಿಸಿ, ಕರ್ನಾಟಕದ ಯಾವುದೇ ನಾಯಕರು ಸ್ಥಾನ ಪಡೆದಿಲ್ಲ. ಸಿಟಿ ರವಿ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುತ್ತಾರೆ ಎನ್ನುವ ವದಂತಿ ಹರಡಿದೆ. ಆಗಸ್ಟ್ ಮೊದಲ ವಾರದಲ್ಲಿ ಕರ್ನಾಟಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಆಗುವ ಸಾಧ್ಯತೆಯಿದೆ.
ಇತ್ತೀಚೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಯಲ್ಲಿ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಇವರಲ್ಲಿ ಒಬ್ಬರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಬಿಜೆಪಿ ರಾಷ್ಟ್ರೀಯ ನಾಯಕರು ಬೇರೆ ನಿರ್ಧಾರಕ್ಕೆ ಬಂದಂತೆ ಕಾಣುತ್ತಿದೆ.
ಒಕ್ಕಲಿಗ ನಾಯಕ ರಾಜ್ಯಾಧ್ಯಕ್ಷರಾದರೆ ಲಿಂಗಾಯತ ನಾಯಕರೊಬ್ಬರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕನ ಸ್ಥಾನದ ರೇಸಿನಲ್ಲಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡವರೇ ಆಯ್ಕೆಯಾಗೋದು ಖಚಿತವಾಗಿದೆ. ಸಂತೋಷ್ ಬಣದ ಸಿಟಿ ರವಿ ಅಧ್ಯಕ್ಷ ಸ್ಥಾನಕ್ಕೇರಿದಲ್ಲಿ ಬಸವರಾಜ ಬೊಮ್ಮಾಯಿ ಅವರೇ ಪ್ರತಿಪಕ್ಷ ನಾಯಕ ಆಗೋದು ಪಕ್ಕಾ ಎನ್ನಲಾಗುತ್ತಿದೆ.
BJP president J P Nadda reshuffled the party's team of central office-bearers on Saturday. Senior leader from Karnataka, C T Ravi was dropped as the party's National General Secretary.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm