ಬ್ರೇಕಿಂಗ್ ನ್ಯೂಸ್
05-08-23 08:24 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಈ ಜನ್ಮದಲ್ಲಿ ಮಾತ್ರ ಅಲ್ಲ, ಮುಂದಿನ ಜನ್ಮದಲ್ಲಿಯೂ ಅವರು ನನಗೆ ತಮ್ಮನಾಗೋದು ಬೇಡವೇ ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಕಾರ್ಪೋರೇಷನ್ (ಬಿಬಿಎಂಪಿ) ಕಚೇರಿಯಲ್ಲಿ ಏನು ನಡೀತು? 710 ಕೋಟಿ ರೂ. ಬಿಡುಗಡೆ ಆಗಿರಬೇಕಲ್ಲ. ಅದಕ್ಕೆ 26 ಅಂಶಗಳ ಮೇಲೆ ತನಿಖೆ ಮಾಡ್ತಾರಂತೆ. ಅಣ್ಣ ಹೇಳ್ತಾರೆ, ತಮ್ಮ ಕೇಳ್ಬೇಕು ಅಂತಾ ಅದೇನೋ ಡಿಕೆ ಶಿವಕುಮಾರ್ ಹೇಳಿದ್ದಾರಲ್ಲ. ಈ ಜನ್ಮದಲ್ಲಂತೂ, ಅಂತಹ ತಮ್ಮ ನನಗೆ ಬೇಡ. ಮುಂದಿನ ಜನ್ಮದಲ್ಲಿಯೂ ನನಗೆ ತಮ್ಮ ಆಗೋದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಹಿಟ್ ಅಂಡ್ ರನ್ ಮಾಡುವ ಜಾಯಮಾನದ ವ್ಯಕ್ತಿ ನಾನಲ್ಲ, ಅದು ಕಾಂಗ್ರೆಸ್ ಸಂಸ್ಕೃತಿ ಎಂದರು. 12 ದಿನಗಳ ಕಾಲ ಹೊರ ದೇಶಕ್ಕೆ ಕುಟುಂಬ ಸಮೇತ ಹೋಗಿದ್ದೆ. ವಾಪಸ್ ಬರುವಾಗ ಏರ್ಪೋರ್ಟ್ನಲ್ಲಿ ಕೆಲ ವಿಷಯಗಳ ಪ್ರಸ್ತಾಪ ಮಾಡಿದ್ದು, ಅದನ್ನು ನಾನು ಹುಡುಗಾಟಿಕೆ, ಅಥವಾ ಸಿಎಂ ಏನೋ ಹೇಳಿದ್ದಾರಲ್ಲ ಹಿಟ್ ಅಂಡ್ ರನ್ ಅಂತ. ಹಿಟ್ ಅಂಡ್ ರನ್ ಜಾಯಮಾನದ ವ್ಯಕ್ತಿ ನಾನಲ್ಲ ಎಂದರು.
ಚುನಾವಣೆ ಸಂದರ್ಭದಲ್ಲಿ ಕಮಿಷನ್ ಎಂದು ಜಾಹೀರಾತು ಕೊಟ್ರಲ್ಲ ಇವರು. ಹಿಂದಿನ ಸರ್ಕಾರದ ಕಮಿಷನ್ ಬಗ್ಗೆ ದಾಖಲೆ ಕೊಡೋಕೆ ಆಗಿಲ್ಲ ಇವರ ಕೈಯಲ್ಲಿ.
ಕಾಂಗ್ರೆಸ್ನವರು ನುಡಿದಂತೆ ನಡೆದಿದ್ದೇವೆ ಎಂದು ಜಾಹಿರಾತು ಕೊಟ್ಟಿದ್ದಾರೆ. ನೀವು ಯಾವ ರೀತಿ ನುಡಿದಂತೆ ನಡೆದಿದ್ದೀರಿ? ಎಂದು ಪ್ರಶ್ನಿಸಿದ ಎಚ್ಡಿಕೆ, ನೀವು ಕರೆಂಟ್ ಕೊಟ್ಟ ನಂತರ ಪಾಪ ಅವ್ರು ಬೆಳಕು ಕಾಣ್ತಿದ್ದಾರೆ ಅಲ್ವಾ? 200 ಯೂನಿಟ್ ಉಚಿತ ಎಂದು ಗೈಡ್ ಲೈನ್ಸ್ ಹಾಕಿದ್ರಲ್ಲ ಅದಕ್ಕೆ ನನ್ನ ತಕರಾರು ಇಲ್ಲ. 230-240 ಯುನಿಟ್ ವಿದ್ಯುತ್ ಬಳಸಿದವರಿಗೂ ವಿದ್ಯುತ್ ಬಿಲ್ ಕಳುಹಿಸಿದ್ದಾರೆ. ಅಲ್ಲೆಲ್ಲೋ ಕಲ್ಬುರ್ಗಿಗೆ ಇವತ್ತು ಹೋಗಿದ್ದಾರೆ. ಇವತ್ತು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಅಲ್ಲಿ ಏನೋ ಉಚಿತ ಬಿಲ್ ಕೊಡೋಕೆ ಹೋಗಿದ್ದಾರೆ. ಟೋಪಿ ಹಾಕೋಕೂ ಒಂದು ಇತಿ ಮಿತಿ ಇದೆ. ಬಿಜೆಪಿ ಸರ್ಕಾರ ಇದ್ದಾಗ ಚೆಂಡು ಹೂ ಮುಟ್ಕೊಂಡು ಹೋಗಿದ್ರಿ. ಇವಾಗ ರಾಜ್ಯದ ಜನರಿಗೆ ಫ್ಲವರ್ ಫಾಟ್ ಹಿಡ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
Kumaraswamy slams at DK Shivakumar, says he will never ever be my brother.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm