ಬ್ರೇಕಿಂಗ್ ನ್ಯೂಸ್
07-08-23 02:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಕೃಷಿ ಸಚಿವ ಚಲುರಾಯಸ್ವಾಮಿ ವಿರುದ್ದ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳೇ ತಿರುಗಿ ಬಿದ್ದಿದ್ದು, ಸಚಿವರು 6-8 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವರು ಲಂಚ ನೀಡುವಂತೆ ಮೇಲಾಧಿಕಾರಿಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ಈ ಲಂಚಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ವಿಷ ಕುಡಿಯುವುದಾಗಿ ಏಳು ಮಂದಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಆತಂಕ ಹೇಳಿಕೊಂಡಿದ್ದಾರೆ.
ಅಧಿಕಾರಿಗಳ ದೂರಿನ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಆಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ಶಾಸಕಾಂಗ ಸಭೆ ನಡೆಸುವಂತೆ ಹಲವು ಶಾಸಕರು ಪತ್ರ ಬರೆದಿದ್ದರು. ಅದರಲ್ಲಿ ಹಲವು ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದೂ ನಡೆದಿತ್ತು. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಉಂಟಾದ ಈ ಅಸಮಾಧಾನದ ಹೊಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ಪಿ ಸಭೆ ಕರೆದು ಶಮನಗೊಳಿಸುವ ಪ್ರಯತ್ನ ನಡೆಸಿದ್ದರು. ಇದೀಗ ಪ್ರಮುಖ ಸಚಿವರೊಬ್ಬರ ವಿರುದ್ಧ ಅಧಿಕಾರಿಗಳೇ ರಾಜ್ಯಪಾಲರಿಗೆ ದೂರು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
Officers file complaint against Chaluvaraya Swamy to karnataka governor.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am