ಬ್ರೇಕಿಂಗ್ ನ್ಯೂಸ್
11-08-23 01:48 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ರಾಜ್ಯಾದ್ಯಂತ 25 ಸಾವಿರ ಕೋಟಿ ರೂಪಾಯಿ ಗುತ್ತಿಗೆದಾರರಿಗೆ ಸರ್ಕಾರದಿಂದ ಪಾವತಿಗೆ ಬಾಕಿ ಉಳಿದಿದೆ, ಕಳೆದ 7 ತಿಂಗಳಿನಿಂದ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾಗಿಲ್ಲ. ಬೆಂಗಳೂರಿನಲ್ಲಿ ಗುತ್ತಿಗೆದಾರರಿಗೆ ಕಮಿಷನ್ ಕೇಳಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಕೆಂಪಣ್ಣ, ಈಗಾಗಲೇ ಕೆಲವಷ್ಟು ಹಣ ಬಿಡುಗಡೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ. ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಅಂತ ಹೇಳಿದ್ದೇವೆ ಎಂದರು. ನಮ್ಮ ಸಮಸ್ಯೆ ಕುರಿತು ಈ ಮೊದಲು ಸಿಎಂ ಆಗಿದ್ದ ಯಡಿಯೂರಪ್ಪ ಅವರಿಗೆ ಪತ್ರ ಕೊಟ್ಟಿದ್ದೆವು. ಬಳಿಕ ಪ್ರಧಾನಿ ಗೆ ಪತ್ರ ಕೊಟ್ಟಿದ್ದೇವೆ. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೂ ಪತ್ರ ಕೊಟ್ಟಿದ್ದೇವೆ. ಕುಮಾರಸ್ವಾಮಿ ನಮ್ಮ ಕೇಸ್ ತೆಗೆದುಕೊಳ್ಳಲಿಲ್ಲ. ಸಿದ್ದರಾಮಯ್ಯ ಕೂಡ ಕೇಸ್ ತೆಗೆದುಕೊಳ್ಳಲಿಲ್ಲ. ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಈ ಹಿಂದೆ ಕರೆದಿದ್ದರು, ಹಾಗಾಗಿ ಹೋಗಿದ್ದೆ. ಈಗ ಬಿಜೆಪಿ ವಿರೋಧ ಪಕ್ಷದ ನಾಯಕರು ಕರೆದರೂ ಹೋಗುತ್ತೇನೆ. ಕಾಮಗಾರಿಗಳ ತನಿಖೆಗೆ ಎಸ್ ಐಟಿ ತನಿಖೆಗೆ ವಹಿಸುವುದು ಬೇಡ ಎಂದು ಹೇಳಿದರು.
ಈ ಹಿಂದೆ ನಾವು 40% ಭ್ರಷ್ಟಾಚಾರ ನಡೀತಿದೆ ಅಂತ ಆರೋಪ ಮಾಡಿದ್ದೆವು. ನಮ್ಮ ಬಳಿ ದಾಖಲೆ ಇದೆ, ಕಮಿಷನ್ ಬಳಿ ಹೋಗಿ ದಾಖಲೆ ಕೊಡುತ್ತೇನೆ. ಬವಸರಾಜ ಬೊಮ್ಮಾಯಿಗೆ ಎಷ್ಟು ಬಾರಿ ಭೇಟಿ ಮಾಡಲು ಸಮಯ ಕೇಳಿದ್ದೆವು. ಆದರೆ, ಅವರು ನಮಗೆ ಭೇಟಿಗೆ ಅವಕಾಶವೇ ಕೊಡಲಿಲ್ಲ. ಅವರಿಗೆ ಚೀಟಿ ಕೊಟ್ಟೆವು, ಜೇಬಲ್ಲಿ ಇಟ್ಟುಕೊಂಡು ಹೋದರು. ಕರೆದು ಮಾತಾಡೋ ಕೆಲಸ ಮಾಡಲಿಲ್ಲ. ಅವರಿಗೆ ಬೇಕಾದವರಿಗೆ ಮಾತ್ರ ಹಣ ಬಿಡುಗಡೆ ಮಾಡಿದ್ದಾರೆ. ಆದರೂ ನಮಗೆ ಈಗಲೂ ಅವರ ಮೇಲೆ ಗೌರವ ಇದೆ ಎಂದು ಹೇಳಿದರು.
Contractors are again on a collision course with the Karnataka government. While the Bruhat Bengaluru Mahanagara Palike (BBMP) contractors have stopped work, demanding immediate clearance of pending bills, contractors across the State have also warned that they may tread the same path if bills are not cleared soon. The pending bills, cumulatively, have mounted to about ₹25,000 crore in the State.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm