ಬ್ರೇಕಿಂಗ್ ನ್ಯೂಸ್
12-08-23 12:51 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಬೆಂಗಳೂರಿನ ಸಿಸಿಬಿ ಅಧಿಕಾರಿಗಳೇ ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ವಿಚಾರ ಬೆಳಕಿಗೆ ಬಂದಿದ್ದು, ತನಿಖಾಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಎಸ್ಐಟಿ ತನಿಖಾ ತಂಡದ ಡಿವೈಎಸ್ಪಿ ಕಾನಟ್ ಪೇಟೆ ಠಾಣೆಯಲ್ಲಿ ದೂರು ನೀಡಿದ್ದು ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ಬಿಟ್ ಕಾಯಿನ್ ವಂಚನೆ ಬಗ್ಗೆ ಕೆಂಪೇಗೌಡ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು 2019ರಲ್ಲಿ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಇದೀಗ ಡಿವೈಎಸ್ಪಿ ದೂರಿನಂತೆ, ಈ ಹಿಂದೆ ತನಿಖೆ ನಡೆಸಿದ್ದವರ ವಿರುದ್ಧವೇ ಒಳಸಂಚು, ಸಾಕ್ಷ್ಯನಾಶ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಗುರಿಪಡಿಸಲು ಎಸ್ಐಟಿ ಸಿದ್ಧತೆ ನಡೆಸಿದೆ.
ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕಿ ಮತ್ತಿತರ ಆರೋಪಿಗಳ ವಿರುದ್ಧ ಕೆಂಪೇಗೌಡ ನಗರ ಠಾಣೆಯಲ್ಲಿ 2020ರಲ್ಲಿ ಬಿಟ್ ಕಾಯಿನ್ ವಂಚನೆ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆಯ ಜವಾಬ್ದಾರಿ ಹೊತ್ತಿದ್ದ ಸಿಸಿಬಿ ಅಧಿಕಾರಿಗಳು ಆರೋಪಿಗಳಿಂದ ಪೆನ್ ಡ್ರೈವ್, ಆಪ್ ಮ್ಯಾಕ್ ಬುಕ್, ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್ ಗಳನ್ನು ಜಪ್ತಿ ಮಾಡಿದ್ದರು. ಈ ಡಿಜಿಟಲ್ ಸಾಕ್ಷ್ಯಗಳನ್ನು ಸಿಸಿಬಿ ಅಧಿಕಾರಿಗಳು ತಿರುಚಿದ್ದಲ್ಲದೆ, ಹೆಚ್ಚುವರಿಯಾಗಿ ಫೈಲ್ ಗಳನ್ನು ಸೃಷ್ಟಿಸಿದ್ದರು. ಮೂಲ ಫೈಲ್ ಗಳನ್ನು ಅಳಿಸಿ ಹಾಕಿ ಆರೋಪಿಗಳಿಗೆ ನೆರವಾಗಿದ್ದರು. ಈ ಮೂಲಕ ಅಧಿಕಾರ ದುರುಪಯೋಗಪಡಿಸಿ ಪ್ರಕರಣದ ಸಾಕ್ಷ್ಯಗಳು, ಅದರಲ್ಲಿನ ಮೌಲ್ಯಗಳನ್ನು ಕಡಿಮೆಗೊಳಿಸಿರುವುದು ತನಿಖೆಯಲ್ಲಿ ಕಂಡುಬಂದಿದೆ. 2020ರ ಸೆಪ್ಟಂಬರ್ 9ರಿಂದ ಡಿಸೆಂಬರ್ 16ರ ವರೆಗಿನ ಅವಧಿಯಲ್ಲಿ ಈ ಕೃತ್ಯ ಎಸಗಿದ್ದರು ಎಂದು ಕಾಟನ್ ಪೇಟೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಡಿವೈಎಸ್ಪಿ ತಿಳಿಸಿದ್ದಾರೆ.
ಬಿಜೆಪಿ ಸರಕಾರದ ಸಚಿವರು, ಪ್ರಮುಖ ನಾಯಕರು ಭಾಗಿಯಾಗಿದ್ದಾರೆ ಎನ್ನಲಾದ ಬಿಟ್ ಕಾಯಿನ್ ಹಗರಣದ ವಿಸ್ತೃತ ತನಿಖೆಗೆ ಕಾಂಗ್ರೆಸ್ ಸರಕಾರ ಮನೀಶ್ ಕರ್ಬೀಕರ್ ನೇತೃತ್ವದ ವಿಶೇಷ ತನಿಖಾ ತಂಡ ರಚಿಸಿತ್ತು. ತನಿಖಾ ತಂಡ ಹಗರಣದ ಮೂಲ ದಾಖಲೆಗಳನ್ನು ಸಿಸಿಬಿ ಬಳಿಯಿಂದ ವಶಕ್ಕೆ ಪಡೆದಿತ್ತು. ಬಳಿಕ ಹಾರ್ಡ್ ಡಿಸ್ಕ್ ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಈ ವೇಳೆ ಮೂಲ ದಾಖಲೆಗಳನ್ನು ಅಳಿಸಿ ಹೆಚ್ಚುವರಿ ಫೈಲ್ ಸೃಷ್ಟಿಸಲಾಗಿದೆ ಎಂದು ಎಫ್ಎಸ್ಎಲ್ ತಜ್ಞರು ವರದಿ ನೀಡಿದ್ದರು. ಇದರಂತೆ, ಸಿಸಿಬಿ ಅಧಿಕಾರಿಗಳೇ ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಿರುವುದು ಬೆಳಕಿಗೆ ಬಂದಿದ್ದು, ಅವರ ವಿರುದ್ಧವೇ ಪ್ರಕರಣ ತಿರುಗುವಂತಾಗಿದೆ.
The Criminal Investigation Department (CID), which took over the probe into the alleged bitcoin scam from the Central Crime Branch (CCB) recently, has now filed a complaint on the Investigating Officers (IOs) of the case for allegedly tampering with the evidence.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm