ಬ್ರೇಕಿಂಗ್ ನ್ಯೂಸ್
13-08-23 12:33 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 13: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಹಾಗೂ ಚಾಲಕ ಮಧುಸೂಧನ್ (25) ಮೃತ ದುರ್ದೈವಿಗಳಾಗಿದ್ದಾರೆ.
ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಅವರಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರಾದ ಏಳು ಜನರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಇಡೀ ಕುಟುಂಬ ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೊರಟಿತ್ತು. ಇಂದು ನಸುಕಿನ ಜಾವ 3:30ಕ್ಕೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟು ಮೂವರಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chitradurga Four of a Family Including 8 year Child Killed in Tragic Car Lorry Collision.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
07-07-25 03:30 pm
Mangalore Correspondent
Moral policing, Puttur, Mangalore Crime: ನೀನು...
07-07-25 12:20 pm
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm