ಬ್ರೇಕಿಂಗ್ ನ್ಯೂಸ್
19-08-23 04:30 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆಯ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಕೊಲೆ ಪ್ರಕರಣವು ಕಾನೂನು ನೆಲೆಯಲ್ಲಿ ಪೂರ್ಣಗೊಂಡಿದೆ. ಮರು ತನಿಖೆ ಆಗಬೇಕು ಎನ್ನುವುದು ಸಾರ್ವಜನಿಕರ ಆಗ್ರಹ. ಸಾರ್ವಜನಿಕ ವಲಯದಲ್ಲಿ ಪರ- ವಿರೋಧ ಇದ್ದೇ ಇರುತ್ತದೆ. ಸದ್ಯಕ್ಕೆ ಈ ಪ್ರಕರಣ ಮುಗಿದ ಅಧ್ಯಾಯ. ಸರಕಾರ ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಪಿಎಸ್ಐ ನೇಮಕಾತಿ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆ ನಡೆಸಬಾರದು ಎಂದು ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸರಕಾರ ಈ ಬಗ್ಗೆ ತನ್ನ ನಿಲುವು ತಿಳಿಸುವಂತೆ ನ್ಯಾಯಾಲಯ ಹೇಳಿತ್ತು. ನಾವು ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದೇವೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸೌಜನ್ಯಾ ಕೊಲೆ ಪ್ರಕರಣದಲ್ಲಿ ರಾಜ್ಯದೆಲ್ಲೆಡೆ ಪ್ರತಿಭಟನೆ, ಮರು ತನಿಖೆಯಾಗಬೇಕೆಂದು ಆಗ್ರಹ ಕೇಳಿಬರುತ್ತಿದ್ದರೂ, ಆ ಬಗ್ಗೆ ನಿರ್ಲಕ್ಷ್ಯ ಸೂಚಿಸುವ ರೀತಿ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರಕರಣ ಮುಗಿದು ಹೋದ ಅಧ್ಯಾಯ ಎನ್ನುವ ಮೂಲಕ ಮರು ತನಿಖೆಗೆ ಆದೇಶ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ದಿನಕ್ಕೊಂದು ಕಡೆ ಪ್ರತಿಭಟನೆ ನಡೆಯುತ್ತಿದ್ದರೂ, ಮರು ತನಿಖೆ ಆಗಬೇಕೆಂದು ಬೆಳ್ತಂಗಡಿಯ ಹಾಲಿ ಶಾಸಕರು, ಮಾಜಿ ಶಾಸಕರು, ಧರ್ಮಸ್ಥಳದ ಕಡೆಯವರೆಲ್ಲ ಆಗ್ರಹ ಮಾಡಿದರೂ ಕಾಂಗ್ರೆಸ್ ಸರ್ಕಾರ ಮಾತ್ರ ನಗಣ್ಯ ಮಾಡಿರುವುದು ಕುತೂಹಲ ಮೂಡಿಸಿದೆ.
No reinvestigation of Sowjanya murder and rape case says home minister Parmeshwar.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm