ಬ್ರೇಕಿಂಗ್ ನ್ಯೂಸ್
19-08-23 07:38 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 19: ದಾವಣೆಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಅವರ ಪತ್ನಿ ಪ್ರತಿಭಾ ಹೊನ್ನಾಳ(35), ಅವರ ಪುತ್ರ ಯಶ್ ಹೊನ್ನಾಳ(06) ಎಂದು ಗುರುತಿಸಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯೋಗೇಶ್-ಪ್ರತಿಭಾ ದಂಪತಿಗೆ 9 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ದಂಪತಿಗೆ ಆರು ವರ್ಷದ ಪುತ್ರನಿದ್ದಾನೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದೆ ಇದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಗಳ ಯೋಗಕ್ಷೇಮ ವಿಚಾರಿಸಲೆಂದು ಅವರ ಮನೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಯಾರು ಕರೆಯನ್ನು ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ ಅವರ ಸಹೋದರನಿಗೆ ವಿಷಯವನ್ನು ತಿಳಿಸಿದ್ದಾರೆ.
ಮೂವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಿಸಿಕೊಡುವಂತೆ ಯೋಗೇಶ್ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Davanagere Techie couple along with six year old son found dead at America.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am