ಬ್ರೇಕಿಂಗ್ ನ್ಯೂಸ್
31-08-23 04:01 pm HK News Desk ಕರ್ನಾಟಕ
ಶಿವಮೊಗ್ಗ,ಆ.31: ಮಲೆನಾಡಿಗರ ಹಲವು ವರ್ಷಗಳ ಲೋಹದ ಹಕ್ಕಿಯ ಕನಸು, ನನಸಾಗಿದ್ದು, ಬೆಂಗಳೂರಿನಿಂದ ಆಗಮಿಸಿದ ಮೊದಲ ನಾಗರಿಕ ವಿಮಾನ ಗುರುವಾರ ಶಿವಮೊಗ್ಗದಲ್ಲಿ ಭೂಸ್ಪರ್ಶ ಮಾಡಿತು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ನಾಗರಿಕರನ್ನು ಹೊತ್ತ ಇಂಡಿಗೋ ವಿಮಾನ ಆಗಮಿಸಿದ್ದು, ವಿಮಾನ ಮತ್ತು ಪ್ರಯಾಣಿಕರಿಗೆ ಏರ್ಪೋರ್ಟ್ನಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ಶಿವಮೊಗ್ಗ ಏರ್ಪೋರ್ಟ್ಗೆ ಆಗಮಿಸಿದ ಮೊದಲ ವಿಮಾನಕ್ಕೆ ಎರಡು ಫೈರ್ ಇಂಜಿನ್ ವಾಹನಗಳಿಂದ ವಾಟರ್ ಸೆಲ್ಯೂಟ್ ಮಾಡಿ ಸ್ವಾಗತಿಸಲಾಯಿತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ ಮೊದಲ ವಿಮಾನದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಬಿವೈ ವಿಜಯೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಮತ್ತಿತರ ಗಣ್ಯರಿದ್ದರು.
55 ನಿಮಿಷದ ಪ್ರಯಾಣ!
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.50ಕ್ಕೆ ಹೊರಟ ಇಂಡಿಗೋ ಏರ್ಲೈನ್ಸ್ಗೆ ಸೇರಿದ ನಾಗರಿಕ ವಿಮಾನ ಬೆಳಗ್ಗೆ 10.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ 55 ನಿಮಿಷದಲ್ಲಿ ವಿಮಾನ ಬಂದು ತಲುಪಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದ ಮೊದಲ ನಾಗರಿಕ ಪ್ರಯಾಣ ವಿಮಾನ ಎಂಬ ಹೆಗ್ಗಳಿಕೆಗೆ ಇಂಡಿಗೋ ವಿಮಾನ ಪಾತ್ರವಾಗಿದೆ.
ಇಂಡಿಗೋ ಬಸ್ ಆಗಮನ!
ಟರ್ಮಿನಲ್ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಕರೆದೊಯ್ಯಲು ಇಂಡಿಗೋ ಸಂಸ್ಥೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಿದೆ. ಚೆಕ್ ಇನ್ ಮತ್ತು ಭದ್ರತಾ ತಪಾಸಣೆ ಮುಗಿಯುತ್ತಿದ್ದಂತೆ ಟರ್ಮಿನಲ್ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಬಸ್ಸಿನಲ್ಲಿ ಕರೆದೊಯ್ಯಲಾಗುತ್ತದೆ. ಇನ್ನು ವಿಮಾನದಲ್ಲಿ ಬಂದಿಳಿಯುವವರನ್ನು ಟರ್ಮಿನಲ್ವರೆಗೆ ಕರೆದುಕೊಂಡು ಬರಲು ಕೂಡ ಇದೆ ಬಸ್ ಬಳಕೆಯಾಗಲಿದೆ.
ಇದಕ್ಕಾಗಿ ಇಂಡಿಗೋ ಸಂಸ್ಥೆ ತನ್ನದೆ ಬ್ರಾಂಡಿಂಗ್ನ ಬಸ್ ತರಿಸಿದೆ. ಹವಾನಿಯಂತ್ರಿತ ಬಸ್ಸಿನ ಎರಡು ಬದಿಯಲ್ಲೂ ಆಟೊಮ್ಯಾಟಿಕ್ ಡೋರ್ ವ್ಯವಸ್ಥೆ ಇದೆ. ಒಳಗೆ ಪ್ರಯಾಣಿಕರು ಕೂರಲು, ಲಗೇಜ್ ಇಟ್ಟುಕೊಳ್ಳಲು ಜಾಗ ಕಲ್ಪಿಸಲಾಗಿದೆ. ಎಲ್ಲ ವಿಮಾನ ನಿಲ್ದಾಣಗಳಲ್ಲಿಯೂ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ವಿಮಾನದವರೆಗೆ ಕರೆದೊಯ್ಯಲು ಮತ್ತು ಟರ್ಮಿನಲ್ವರೆಗೆ ಕರೆತರಲು ಬಸ್ ವ್ಯವಸ್ಥೆ ಹೊಂದಿರುತ್ತವೆ.
ವಿಮಾನ ಹತ್ತುವ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, "ಎಲ್ಲಾ ಗೌರವಗಳು ಇಲ್ಲಿನ ರೈತರಿಗೆ ಸಲ್ಲಬೇಕು. ಯಾವುದೇ ಅಡ್ಡಿ ಆತಂಕಗಳಿಲ್ಲದೆಯೇ ರೈತರು ಜಾಗ ಬಿಟ್ಟು ಕೊಟ್ಟ ಪರಿಣಾಮ ಶೀಘ್ರದಲ್ಲೇ ನಾವು ಏರ್ಪೋರ್ಟ್ ಮಾಡಲು ಸಾಧ್ಯವಾಯಿತು. ನಮಗೆ ಸಹಕಾರ ಕೊಟ್ಟ ಎಲ್ಲಾ ರೈತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ನಾವು ವಿಮಾನದಲ್ಲಿ ಇಬ್ಬರು ರೈತರನ್ನು ಕರೆದುಕೊಂಡು ಹೋಗುತ್ತಿದ್ದೇವೆ. ರೈತರ ಆಶೀರ್ವಾದದಿಂದಲೇ ಈ ಕೆಲಸ ಆಗಿದೆ" ಎಂದರು.
ಬಳಿಕ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, "ಶಿವಮೊಗ್ಗಕ್ಕೆ ಮೊದಲ ವಿಮಾನ ಸೇವೆ ಪ್ರಾರಂಭವಾಗಿದೆ. ರಾಷ್ಟ್ರಕವಿ ಕುವೆಂಪು ಅವರು ಜನಿಸಿದ ಊರು ಶಿವಮೊಗ್ಗ ಆಗಿರುವುದರಿಂದ ಕುವೆಂಪು ವಿಮಾನ ನಿಲ್ದಾಣವೆಂದೇ ಹೆಸರಿಟ್ಟಿದ್ದೇವೆ. ಒಟ್ಟಾರೆಯಾಗಿ ಇದೊಂದು ಐತಿಹಾಸಿಕ ಕ್ಷಣ. ವಿಮಾನ ಆರಂಭದಿಂದ ಮಧ್ಯ ಕರ್ನಾಟಕಕ್ಕೆ ಬಹಳಷ್ಟು ಅನುಕೂಲವಾಗಲಿದೆ" ಎಂದು ನುಡಿದರು.
The dream of a metal bird of malnadis has come true as the first civilian aircraft from Bengaluru landed in Shivamogga on Thursday. For the first time, an IndiGo flight carrying citizens arrived at Shivamogga airport and the flight and passengers were accorded a grand welcome at the airport.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm