ಬ್ರೇಕಿಂಗ್ ನ್ಯೂಸ್
04-09-23 06:19 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.4: ಚುನಾವಣಾ ಅಕ್ರಮಗಳನ್ನು ನಡೆಸಿ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರು ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಹೊಳೆನರಸೀಪುರದ ಪರಾಜಿತ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಎಂಬುವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ, ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ.
ಈ ಹಿಂದೆ ಕೂಡ ವಿಚಾರಣೆ ನಡೆಸಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿತ್ತು. ಆದರೆ, ಪ್ರತಿವಾದಿ ರೇವಣ್ಣ ಅವರು ಸಮನ್ಸ್ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿಗಳ ಮೂಲಕ ಮತ್ತೊಂದು ಬಾರಿ ಸಮನ್ಸ್ ಜಾರಿ ಮಾಡಿದ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟಂಬರ್ 25ಕ್ಕೆ ಮುಂದೂಡಿದೆ.
ಅರ್ಜಿಯಲ್ಲಿನ ಅಂಶಗಳು:
ವಕೀಲ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ ಡಿ ರೇವಣ್ಣ ಭಾರಿ ಅಕ್ರಮಗಳನ್ನು ಎಸಗಿ ಜಯಗಳಿಸಿದ್ದಾರೆ. ಜೊತೆಗೆ, ಮತ ಗಳಿಕೆಯಲ್ಲಿ 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಕೂಡ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹಾಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಹೆಚ್ ಡಿ ರೇವಣ್ಣ 88,103, ಎರಡನೇ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ 84,951 ಹಾಗೂ ಅರ್ಜಿದಾರರು 4,850 ಮತಗಳನ್ನು ಪಡೆದಿದ್ದಾರೆ. ಇನ್ನುಳಿದ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ರೇವಣ್ಣ ವ್ಯಾಪಕ ಚುನಾವಣಾ ಅಕ್ರಮಗಳನ್ನು ಎಸಗಿದ್ದಾರೆ. ಆ ರೀತಿ ಅಕ್ರಮ ಎಸಗಿ ಗಳಿಸಿದ ಮತಗಳನ್ನು ಸಿಂಧುವೆಂದು ಪರಿಗಣಿಸಲು ಪ್ರಜಾಪ್ರತಿನಿಧಿ ಕಾಯಿದೆ 1951, ನೀತಿ ಸಂಹಿತೆ ಮತ್ತು ನಿಯಮ 1961 ಹಾಗೂ 2006ರ ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಹಾಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ಅರ್ಜಿದಾರರನ್ನು ಆಯ್ಕೆಯಾಗಿದ್ದಾರೆಂದು ಘೋಷಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ರೇವಣ್ಣ ಬೆಂಬಲಿಗರಿಂದ ಹಲ್ಲೆ ಆರೋಪ:
ಜೊತೆಗೆ, ಪ್ರತಿವಾದಿ ರೇವಣ್ಣ ಅವರು ಪ್ರಜಾಪ್ರತಿನಿಧಿ ಕಾಯಿದೆ 1951ರ ಹಲವು ಸೆಕ್ಷನ್ಗಳಡಿ ಅಕ್ರಮ ಎಸಗಿದ್ದಾರೆ. ರೇವಣ್ಣ ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿ ಮತದಾರರಿಗೆ 2 ಕೋಳಿ ಮತ್ತು 2000 ರೂ. ನಗದು ಹಂಚಿದ್ದಾರೆ. ಶಾಂತಿಗ್ರಾಮದ ಬಳಿ ಜನರಿಗೆ ಆಮಿಷವೊಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಿಥುನ್, ಮೋಹನ್, ಮಂಜು ಮತ್ತು ಶಂಕರ್ ಸೇರಿ 30 ಮಂದಿ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೇವರಾಜೇಗೌಡರ ಅರ್ಜಿಯಲ್ಲಿ ತಿಳಿಸಲಾಗಿದೆ.
ಆಸ್ತಿಯ ವಿವರಗಳೂ ಸುಳ್ಳು:
ಅಲ್ಲದೆ,ರೇವಣ್ಣ ಅವರು ಸಲ್ಲಿಸಿರುವ ನಾಮಪತ್ರವೇ ದೋಷಪೂರಿತವಾಗಿದೆ. ಅವರು ತಮ್ಮ ಆಸ್ತಿ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಹಲವು ಮಾಹಿತಿಯನ್ನು ಮರೆಮಾಚಿದ್ದಾರೆ. ಆದರೂ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಸಿಂಧು ಎಂದು ಘೋಷಿಸಿದ್ದಾರೆ. ರೇವಣ್ಣರ ಪತ್ನಿ ಭವಾನಿ ರೇವಣ್ಣ ಅವರ ಆಸ್ತಿಯ ವಿವರಗಳೂ ಸಹ ಸುಳ್ಳಿನಿಂದ ಕೂಡಿವೆ ಎಂದು ದೇವರಾಜೇಗೌಡ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂಬಂಧ ಹೊಳೆನರಸೀಪುರದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಕುಟುಂಬ ರಾಜಕೀಯದಲ್ಲಿ ಹೋರಾಟ ಮಾಡಿಕೊಂಡೇ ಬಂದಿರೋದು. ಎರಡು ರಾಷ್ಟ್ರೀಯ ಪಕ್ಷಗಳು ಸೇರಿ ಈ ಪಕ್ಷ ಮುಗಿಸೋದಕ್ಕೆ ಹೊರಟಿದ್ರೆ ಏನ್ ಮಾಡೋಕಾಗುತ್ತೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೆಚ್ಡಿ ದೇವೇಗೌಡರು ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಎಲ್ಲವೂ ಆದ್ರಪ್ಪ. ನನಗೆ ಕೋರ್ಟ್ ನೋಟಿಸ್ ಕೊಟ್ಟರೆ ನಮ್ಮ ವಕೀಲರ ಮೂಲಕ ಉತ್ತರ ಕೊಡುತ್ತೇನೆ ಎಂದರು. ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸುಪ್ರೀಂಕೋರ್ಟ್ನಲ್ಲಿ ತಡೆ ಸಿಗುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಹೆಚ್ಡಿ ರೇವಣ್ಣ, ಮುಂಚಿತವಾಗಿ ನಾನ್ಯಾಕೆ ಅದರ ಬಗ್ಗೆ ಹೇಳಲಿ. ಪ್ರಜ್ವಲ್ ಸುಪ್ರೀಂಕೋರ್ಟ್ಗೆ ಹಾಕ್ತಾರೋ ಏನ್ ಮಾಡ್ತಾರೋ. ಅದು ಅವರಿಗೆ ಬಿಟ್ಟಿದ್ದು, ಅವರ ಕೇಸ್ ಅದು. ಅವರ ಕೇಸ್‌ನಲ್ಲಿ ಏನಾಗುತ್ತೋ ನಾನು ಏನ್ ಹೇಳಲಿ. ಕೆಲವರು ಭವಿಷ್ಯ ನುಡಿಯೋರು ಇದ್ದಾರೆ, ಅದನ್ನ ನಾನ್ಯಾಕೆ ಹೇಳಲಿ. ಕಾನೂನು ಏನಿದೆ ಅದನ್ನ ಪ್ರಜ್ವಲ್‌ರವರು ಮಾಡಿಕೊಳ್ತಾರೆ. ಪ್ರಜ್ವಲ್‌ರವರಿಗೇನು ಏಜ್ ಇಲ್ವಾ? ಅವರು ಏನ್ ಮಾಡಿದ್ದಾರೆ? ಎಂತು ಮಾಡಿದ್ದಾರೆ ಗೊತ್ತಿಲ್ಲ ನನಗೆ. ಅದನ್ನೆಲ್ಲಾ ತಿಳ್ಕೊಂಡು ಎಲ್ಲಾ ಆದ ಮೇಲೆ ಸವಿಸ್ತಾರವಾಗಿ ಹೇಳುತ್ತೇನೆ. ನಮ್ಮ ಜೀವನದಲ್ಲಿ ನಾವು ಯಾವ ಆಸ್ತಿಯನ್ನು ಮುಚ್ಚಿಟ್ಟಿಲ್ಲ. ಐಟಿ ರಿಪೋರ್ಟ್ ಅನ್ನು ನಾನು ಕೊಡ್ತೀನಿ ನನ್ನ ಹೆಂಡತಿನೂ ಕೊಡ್ತಾರೆ. ಪಡುವಲ ಹಿಪ್ಪೆ ಬಳಿ ತೆಂಗು, ಅಡಿಕೆ, ಸಪೋಟ, ಮಾವಿನ ತೋಟವು ಇದೆ. ಎಲ್ಲವನ್ನು ಚೆಕ್ ಮೇಲೆ ತೆಗೆದುಕೊಂಡಿರೋದು. ನನ್ನದೆಲ್ಲ ಚೆಕ್ ವ್ಯವಹಾರನೆ. ಪ್ರತಿ ಹಂತ ಹಂತದಲ್ಲೂ ಇನ್ಕಮ್ ಟ್ಯಾಕ್ಸ್ಗೆ ಮಾಹಿತಿ ಕೊಡುತ್ತಿದ್ದೇನೆ ಎಂದು ಹೆಚ್ಡಿ ರೇವಣ್ಣ ತಿಳಿಸಿದರು.
ರಾಜ್ಯದ ಏಕೈಕ ಸಂಸತ್ ಸ್ಥಾನ ಹೊಂದಿದ್ದ ಜೆಡಿಎಸ್ಗೆ ಹೈಕೋರ್ಟ್ ತೀರ್ಪು ಬಿಗ್ ಶಾಕ್ ನೀಡಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಮಾಣ ಪತ್ರ ಸಲ್ಲಿಸುವಾಗ ಪ್ರಜ್ವಲ್ ರೇವಣ್ಣ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟಿದ್ದಾರೆಂಬ ಆರೋಪದದಲ್ಲಿ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸದಸ್ಯತ್ವವನ್ನೇ ಅಸಿಂಧುಗೊಳಿಸಿ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ತಮ್ಮ ಸಂಸತ್ ಸದಸ್ಯತ್ವ ಕಳೆದುಕೊಂಡಿದ್ದಾರೆ. ಇದರ ನಡುವೆ ಹೆಚ್ಡಿ ರೇವಣ್ಣರಿಗೂ ಈಗ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
The Karnataka High Court on Wednesday issued summons to H.D. Revanna, JD(S) MLA and son of former Prime Minister H.D. Deve Gowda in connection with a petition seeking action against him for poll malpractice in the recent Assembly elections in the state.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 09:23 pm
Mangalore Correspondent
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm