ಬ್ರೇಕಿಂಗ್ ನ್ಯೂಸ್
08-09-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆಯಾಗಬೇಕೆಂದು ಹೈಕೋರ್ಟಿಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶರು ಪರಿಗಣಿಸಲು ಒಪ್ಪಿಗೆ ನೀಡಿಲ್ಲ. ಬದಲಿಗೆ, ಮೂಲ ಅರ್ಜಿದಾರರು, ಸಂತ್ರಸ್ತ ಕುಟುಂಬ ಅಥವಾ ಸರಕಾರ ಮಾತ್ರ ಮರು ತನಿಖೆಗೆ ಮನವಿ ಮಾಡಬಹುದೆಂದು ಹೇಳಿದೆ.
ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗಿರೀಶ್ ಭಾರದ್ವಾಜ್, ನವೀನ್ ಕುಮಾರ್ ನೆರಿಯ ಮತ್ತು ವಿನಾಯಕ ಫ್ರೆಂಡ್ಸ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಧೀಶರು ವಿಚಾರಣೆಗೆ ಸ್ವೀಕರಿಸಿದ್ದರು. ಇವರ ಪರವಾಗಿ ಪುತ್ತೂರಿನ ವಕೀಲ ಅರುಣ್ ಶ್ಯಾಮ್ ವಕಾಲತ್ತು ಮಂಡಿಸಿದ್ದರು.
ಆದರೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮೂರನೇ ವ್ಯಕ್ತಿಯ ಕೋರಿಕೆ ಮೇರೆಗೆ ಒಂದು ಪ್ರಕರಣವನ್ನು ಮರು ತನಿಖೆ ಮಾಡಲು ಅವಕಾಶ ಇರುವುದಿಲ್ಲ. ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮಾತ್ರ ಆರೋಪಿಯನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶ ಇದೆ. ಅದು ಬಿಟ್ಟರೆ ಸಾರ್ವಜನಿಕರ ಹಕ್ಕೊತ್ತಾಯ, ಜನಾಕ್ರೋಶಕ್ಕೆ ಮಣಿದು ರಾಜ್ಯ ಸರಕಾರವೂ ಈ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ ನ್ಯಾಯಾಧೀಶರು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಹಾಗೆಂದು ಕೋರ್ಟಿನ ತೀರ್ಪಿನ ವಿರುದ್ಧ ಸಭೆ, ಸಮಾರಂಭ, ಧರಣಿ ಅಥವಾ ಜನರ ಭಾವನೆಗಳನ್ನು ಪರಿಗಣಿಸಿ ಕೋರ್ಟ್ ಕಾನೂನು ಚೌಕಟ್ಟನ್ನು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ, ಕಾನೂನು ಮಿತಿಯಲ್ಲಿ ವ್ಯವಹರಿಸಬೇಕಾಗುತ್ತದೆ. ಇದರ ಬದಲು ಸಂತ್ರಸ್ತ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡುವಂತೆ ಇಬ್ಬರು ನ್ಯಾಯಾಧೀಶರಿದ್ದ ವಿಭಾಗೀಯ ಪೀಠ ಸಲಹೆ ಮಾಡಿದೆ.
Sowjanya rape case, No third party allowed for re-investigation, PIL petition dismissed in High Court. The judge did not agree to consider the public interest petition submitted to the High Court for a re-investigation in the Sowjanya murder case.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm