ಬ್ರೇಕಿಂಗ್ ನ್ಯೂಸ್
20-09-23 10:50 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.20: ಸ್ವಯಂಘೋಷಿತ ಸ್ವಾಮೀಜಿ ಎಂದು ಹೇಳಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಪ್ರಣವಾನಂದ ಸ್ವಾಮೀಜಿಗಳು ಈಡಿಗ ಸಮುದಾಯದ ಸ್ವಯಂ ಘೋಷಿತ ಸ್ವಾಮೀಜಿಗಳೆಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈಡಿಗ ಸಮುದಾಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಅವರು ರಾಜಕೀಯ ಮುಖಂಡರಲ್ಲಿ ಬಿನ್ನಾಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಕ್ಷೇತ್ರದಲ್ಲಿ ಅಲ್ಲೋಲ ಕಲ್ಲೋಲ ಮೂಡಿಸುತ್ತಿರುವುದು ಸರಿಯಲ್ಲ. ನಮ್ಮ ಕೇಂದ್ರ ಸಂಘ ಹಾಗೂ ಜಿಲ್ಲಾ ಸಂಘಗಳ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ʼಈಡಿಗ ಸಮುದಾಯ ಸಂಘ ಸ್ಥಾಪನೆಯಾಗಿ 78 ವರ್ಷಗಳು ಕಳೆದಿವೆ. 2008ರಲ್ಲಿ ರೇಣುಕಾನಂದ ಎಂಬವರನ್ನು ಸ್ವಾಮೀಜಿಗಳನ್ನಾಗಿ ನೇಮಕ ಮಾಡಲಾಯಿತು. ಬಳಿಕ ರೇಣುಕಾನಂದರವರು ತಮ್ಮ ಹೆಚ್ಚಿನ ಆಧ್ಯಾತ್ಮಿಕ ಅಧ್ಯಯನಕ್ಕಾಗಿ 2014 ರಲ್ಲಿ ಪೀಠವನ್ನು ತ್ಯಜಿಸಿದರು. ಪ್ರಸ್ತುತ ಬಿ.ಕೆ.ಹರಿಪ್ರಸಾದ್ ಅವರ ಒಪ್ಪಿಗೆ ಮೇರೆಗೆ ವಿಖ್ಯಾತಾನಂದ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ. ಆದರೆ ಪ್ರಣವಾನಂದ ಅನಧಿಕೃತವಾಗಿ ಈಡಿಗ ಸ್ವಾಮೀಜಿಗಳೆಂದು ಹೇಳಿಕೊಂಡು ಜನಾಂಗವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ನಿರ್ದೇಶಕರಾದ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀಧರ್, ರಾಮನಗರ, ಚಿತ್ರದುರ್ಗ, ಬೆಳಗಾವಿ ಜಿಲ್ಲಾ ಅಧ್ಯಕ್ಷರು, ಬಿಲ್ಲವ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಾಮಧಾರಿ ದೀವರ ಅಧ್ಯಕ್ಷರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
Karnataka Idiga community slams Pranavananda swami says he doesn't belong to Idiga.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 01:23 pm
HK News Desk
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm