ಬ್ರೇಕಿಂಗ್ ನ್ಯೂಸ್
11-11-20 11:38 am Headline Karnataka News Network ಕರ್ನಾಟಕ
ಬೆಂಗಳೂರು, ನ.11: ರಾಜ್ಯದಲ್ಲಿ ನಿತ್ಯ ಲಕ್ಷದ ಮೇಲೆ ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದರೂ ಎರಡು ಸಾವಿರದ ಅಸುಪಾಸಿನಲ್ಲಿ ಪ್ರಕರಣಗಳು ವರದಿಯಾಗುವ ಪ್ರವೃತ್ತಿ ಮುಂದುವರಿದಿದೆ. ಮಂಗಳವಾರ 2,362 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 4,215 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ 20 ಮಂದಿ ಮೃತರಾಗಿದ್ದಾರೆ.
ಗುಣಮುಖರ ಸಂಖ್ಯೆ ನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,063ಕ್ಕೆ ಇಳಿದಿದೆ. ಸದ್ಯ 869 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಕೊರೋನಾ ಸೋಂಕಿತರು ದಾಖಲಾಗಿಲ್ಲ. ಈವರೆಗೆ ಒಟ್ಟು 8.51 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ 8.08 ಲಕ್ಷ ಜನರು ಗುಣಮುಖರಾಗಿದ್ದಾರೆ. ಈವರೆಗೆ 19 ಮಂದಿ ಕೊರೋನಾ ಸೋಂಕಿತರು ಅನ್ಯ ಕಾರಣದಿಂದ ಹಾಗೂ ಸೋಂಕಿನ ಕಾರಣದಿಂದ ಈವರೆಗೆ 11,430 ಮಂದಿ ಮರಣವನ್ನಪ್ಪಿದ್ದಾರೆ.
ಮಂಗಳವಾರ 1.09 ಲಕ್ಷ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಈವೆಗೆ ಒಟ್ಟು 89.32 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಲ್ಲಿ 3.5 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!


ಬೆಂಗಳೂರಲ್ಲೇ ಹೆಚ್ಚು:
ಬೆಂಗಳೂರು ನಗರ ಜಿಲ್ಲೆಯಲ್ಲಿ 8, ಬೆಂಗಳೂರು ಗ್ರಾಮಾಂತರ 3, ಬಳ್ಳಾರಿ 2, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ತುಮಕೂರು ಮತ್ತು ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತರಾಗಿದ್ದಾರೆ. ಉಳಿದ ಇಪ್ಪತ್ತು ಜಿಲ್ಲೆಗಳಲ್ಲಿ ಯಾರೂ ಮೃತರಾಗಿಲ್ಲ
ಬೆಂಗಳೂರು ನಗರ ಜಿಲ್ಲೆಯಲ್ಲಿ 1,176 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಾಗಲಕೋಟೆ 11, ಬಳ್ಳಾರಿ 34, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 55, ಬೀದರ್ 10, ಚಾಮರಾಜ ನಗರ 13, ಚಿಕ್ಕಬಳ್ಳಾಪುರ 57, ಚಿಕ್ಕಮಗಳೂರು 42, ಚಿತ್ರದುರ್ಗ 31, ದಕ್ಷಿಣ ಕನ್ನಡ 87, ದಾವಣಗೆರೆ 29, ಧಾರವಾಡ 18, ಗದಗ 6, ಹಾಸನ 110, ಹಾವೇರಿ 13, ಕಲಬುರಗಿ 9, ಕೊಡಗು 7, ಕೋಲಾರ 25, ಕೊಪ್ಪಳ 16, ಮಂಡ್ಯ 86, ಮೈಸೂರು 135, ರಾಯಚೂರು 24, ರಾಮನಗರ 27, ಶಿವಮೊಗ್ಗ 25, ತುಮಕೂರು 136, ಉಡುಪಿ 27, ಉತ್ತರ ಕನ್ನಡ 20, ವಿಜಯಪುರ 78 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 25 ಹೊಸ ಪ್ರಕರಣಗಳು ಧೃಢ ಪಟ್ಟಿವೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm