ಬ್ರೇಕಿಂಗ್ ನ್ಯೂಸ್
16-10-23 04:27 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಬಗ್ಗೆ ಅಭಿಪ್ರಾಯ ಕೇಳಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ಜೂನ್ 12 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ನ್ಯಾಯಪೀಠ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ. ತಡೆಯಾಜ್ಞೆ ಕಾರಣ ಕೇಂದ್ರ ತನಿಖಾ ತಂಡ ಹೆಚ್ಚಿನ ತನಿಖೆಯನ್ನು ನಿಲ್ಲಿಸಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಐ ತನಿಖೆಯ ಶೇಕಡಾ 90 ರಷ್ಟು ಈಗಾಗಲೇ ಮುಗಿದಿದೆ. ಆದರೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಯಿಂದಾಗಿ ತನಿಖೆ ಮುಂದುವರಿಸುವುದಕ್ಕೆ ತೊಡಕಾಗಿದೆ. ಹೀಗಾಗಿ ಕೋರ್ಟ್ ತಡೆಯಾಜ್ಞೆ ತೆರವಿ ಮಾಡುವಂತೆ ನ್ಯಾಯಪೀಠವನ್ನು ಒತ್ತಾಯಿಸಿದರು.
ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೆ ನವೆಂಬರ್ 7ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಡಿಕೆ ಶಿವಕುಮಾರ್ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.
The Supreme Court on Monday refused to vacate the interim stay on the CBI's investigation into the disproportionate assets case against Karnataka Deputy chief minister DK Shivakumar.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm