ಬ್ರೇಕಿಂಗ್ ನ್ಯೂಸ್
17-10-23 10:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಬಿಜೆಪಿ- ದಳದ ಮೈತ್ರಿ ಬಗ್ಗೆ ಮುನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೊಸ ದಾಳ ಉರುಳಿಸಿದ್ದಾರೆ. ಸಿಎಂ ಇಬ್ರಾಹಿಂ ದಳಪತಿಗಳಿಗೆ ಸವಾಲ್ ಎಸೆದಿದ್ದು ಎಚ್.ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಚಾಟಿಸುವ ಸಾಮರ್ಥ್ಯ ಇದೆಯೆಂದು ಹೇಳಿ ಕುತೂಹಲ ಮೂಡಿಸಿದ್ದಾರೆ.
ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ. ಶಾಸಕರ ನಿರ್ಧಾರ ಏನು ಕಾದು ನೋಡಿ ಎಂದು ಸಿಎಂ ಇಬ್ರಾಹಿಂ ಟ್ವಿಸ್ಟ್ ಕೊಟ್ಟಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿ ವಿರೋಧಿಸಿ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿಎಂ ಇಬ್ರಾಹಿಂ ಬೆಂಗಳೂರಿನಲ್ಲಿ ಅ.16ರಂದು ಬೆಂಬಲಿಗರು, ಕಾರ್ಯಕರ್ತರ ಜತೆ ಸಭೆಯನ್ನು ನಡೆಸಿದ್ದರು. ಸಭೆಯಲ್ಲಿ ನಮ್ಮದೇ ಒರಿಜಿನಲ್ ಜೆಡಿಎಸ್. ಬಿಜೆಪಿಗೆ ಬೆಂಬಲ ಇಲ್ಲ ಎಂದಿರುವ ಇಬ್ರಾಹಿಂ, ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇಬ್ರಾಹಿಂಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಮಗೆ ಅದು ದೊಡ್ಡದಾಗಿ ಕಾಣುತ್ತಿದೆ. ಏನು ಸರಿ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ.. ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.
ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಅವರಿಗೆ ಬಿಟ್ಟದ್ದು. ದಯವಿಟ್ಟು ಇಂತಹ ಸಿಲ್ಲಿ ವಿಚಾರಕ್ಕೆ ಬರಬೇಡಿ. ನಮಗೆ ಏನು ಮಾಡಬೇಕೊ, ಮಾಡುತ್ತೇವೆ. ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ? ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನೀವು ಯಾಕೆ ವರಿ ಮಾಡಿಕೊಳ್ಳುತ್ತೀರಿ ಎಂದರು.
Jd(S) state president C M Ibrahim, who is upset over the BJP-Dal alliance, has thrown a new dice. Chief Minister Ibrahim has challenged the dalapathis, saying that he has the potential to expel HD Kumaraswamy from the party.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am