ಬ್ರೇಕಿಂಗ್ ನ್ಯೂಸ್
21-10-23 04:10 pm Bangalore Correspondent ಕರ್ನಾಟಕ
ಬೆಂಗಳೂರು, ಅ.21: ಪದ್ಮಭೂಷಣ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ಪರ್ವ ಕಾದಂಬರಿ ಬಾಲಿವುಡ್ ಚಿತ್ರವಾಗಿ ತೆರೆಮೇಲೆ ಬರಲು ತಯಾರಾಗಿದೆ. ಕಾಶ್ಮೀರ್ ಫೈಲ್ಸ್, ವ್ಯಾಕ್ಸಿನ್ ವಾರ್ ಚಿತ್ರದ ಮೂಲಕ ದೇಶ- ವಿದೇಶದಲ್ಲಿ ಸಂಚಲನ ಸೃಷ್ಟಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರ್ವ ಚಿತ್ರದ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾದಂಬರಿಕಾರ, ಎಸ್.ಎಲ್ ಭೈರಪ್ಪ, ಪ್ರಕಾಶ್ ಬೆಳವಾಡಿ, ನಿರ್ಮಾಪಕಿ ಪಲ್ಲವಿ ಜೋಶಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲೇ ಪರ್ವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಮಹಾಭಾರತದ ಕಥಾನಕ ಇರುವ ಪರ್ವ ಕನ್ನಡದ ಮೇರು ಕೃತಿಗಳಲ್ಲಿ ಒಂದು. ವಿಶೇಷ ಅಂದರೆ ಮೂರು ಭಾಗಗಳಲ್ಲಾಗಿ ಪರ್ವ ತೆರೆಗೆ ಬರಲಿದೆ. ಈ ಕುರಿತು ವಿವೇಕ್ ಅಗ್ನಿಹೋತ್ರಿ ಸಂತಸ ವ್ಯಕ್ತಪಡಿಸಿದ್ದು, ಮಹಾಭಾರತದ ದೃಶ್ಯಕಾವ್ಯವನ್ನು ಪ್ರಮುಖ ಪಾತ್ರಗಳ ಮೂಲಕ ನಿರೂಪಿಸಲಾಗಿದೆ. ಮಾಡರ್ನ್ ಕ್ಲಾಸಿಕ್ ಕೃತಿಯೆಂದು ಪ್ರಶಂಸೆ ಪಡೆದಿರುವ ಪರ್ವವನ್ನು ತೆರೆ ಮೇಲೆ ತರುವ ಮಹತ್ತರ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ಚಿತ್ರ ನೋಡಿ ಮೆಚ್ಚಿಕೊಂಡಿದ್ದ ಎಸ್.ಎಲ್ ಬೈರಪ್ಪ, ಆಪ್ತರಾಗಿರುವ ಪ್ರಕಾಶ್ ಬೆಳವಾಡಿ ಜೊತೆ ಚಿತ್ರದ ಕುರಿತು ಮಾತನಾಡಿದ್ದರು. ಇದೇ ವೇಳೆ ಪ್ರಕಾಶ್ ಬೆಳವಾಡಿ ದೂರವಾಣಿ ಕರೆ ಮೂಲಕ ವಿವೇಕ್ ಅಗ್ನಿಹೋತ್ರಿ ಜೊತೆ ಮಾತನಾಡಿದ್ದರು. ಎಸ್‌ಎಲ್ ಭೈರಪ್ಪ ಜೊತೆ ಮಾತನಾಡುವಂತೆ ಅಗ್ನಿಹೋತ್ರಿಗೆ ಸೂಚಿಸಿದ್ದರು. ಒಂದು ವರ್ಷ ಹಿಂದೆ ನಡೆದಿರುವ ಈ ಘಟನೆಯನ್ನು ವೇದಿಕೆಯಲ್ಲಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ಭೈರಪ್ಪ ಜೊತೆ ಚರ್ಚಿಸಿ ಪರ್ವ ಕೃತಿಯನ್ನು ತೆರೆ ಮೇಲೆ ತರುವ ಧೈರ್ಯ ಮಾಡಿದ್ದಾಗಿ ತಿಳಿಸಿದ್ದಾರೆ.
BIG ANNOUNCEMENT:
— Vivek Ranjan Agnihotri (@vivekagnihotri) October 21, 2023
Is Mahabharat HISTORY or MYTHOLOGY?
We, at @i_ambuddha are grateful to the almighty to be presenting Padma Bhushan Dr. SL Bhyrappa’s ‘modern classic’:
PARVA - AN EPIC TALE OF DHARMA.
There is a reason why PARVA is called ‘Masterpiece of masterpieces’.
1/2 pic.twitter.com/BiRyClhT5c
Ahead of Dussehra, Vivek Ranjan Agnihotri announced his next film 'Parva.' The movie will be based on a Book named Parva, written by S. L. Bhyrappa. It will be 3 parts big franchise. The director who made the announcement in Bangalore introduced the film team to the audience as well.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm