ಬ್ರೇಕಿಂಗ್ ನ್ಯೂಸ್
23-10-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಅ 23: ಬಿಗ್ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ನನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪದ ಮೇಲೆ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು ಬಿಗ್ಬಾಸ್ ಪ್ರೇಕ್ಷಕರಿಗೂ ಶಾಕ್ ಕೊಟ್ಟಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳು ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿಯಲ್ಲಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ವಾರದ ಕಥೆ ಕಿಚ್ಚನ ಜೊತೆ ಎಪಿಸೋಡ್ ನಲ್ಲಿ ಧರಿಸಿದ್ದ ಅದೇ ಡ್ರೆಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ರನ್ನು ಅರೆಸ್ಟ್ ಮಾಡಲಾಗಿದೆ.
ವರ್ತೂರು ಸಂತೋಷ್ ಕುತ್ತಿಗೆಯಲ್ಲಿ ಹುಲಿಯ ಉಗುರು ;
ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಎಂಬುದು ಖಚಿತವಾಗಿದೆ. ಜಿಲ್ಲಾಧಿಕಾರಿ ಅವರ ಮಾಹಿತಿ ಆಧಾರದ ಮೇಲೆ ಅವರನ್ನು ಬಂಧಿಸಿದ್ದೇವೆ. ತಪಾಸಣೆ ಮಾಡಿದ ಮೇಲೆ ಅದು ಹುಲಿ ಉಗುರು ಎಂದು ಸಾಬೀತಾಗಿದೆ. ಬಿಗ್ ಬಾಸ್ ಮನೆಗೆ ಹೋಗಿ ಅವರನ್ನ ಬಂಧಿಸಿದ್ದೇವೆ' ಎಂದು ಅರಣ್ಯಾಧಿಕಾರಿ ರವೀಂದ್ರ ಮಾಧ್ಯಮ ಒಂದಕ್ಕೆ ತಿಳಿಸಿದ್ದಾರೆ.
ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಿದ್ದರೆ ಅವರಿಗೆ ಮತ್ತೆ ಮನೆ ಒಳಗೆ ಪ್ರವೇಶ ನೀಡುವುದಿಲ್ಲ. ಈಗ ವರ್ತೂರು ಸಂತೋಷ್ ಅವರು ಅರೆಸ್ಟ್ ಆಗಿರುವುದರಿಂದ ಅವರಿಗೆ ಮತ್ತೆ ಬಿಗ್ ಬಾಸ್ ಮನೆ ಒಳಗೆ ಬರೋಕೆ ಅವಕಾಶ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರು ಎಲಿಮಿನೇಟ್ ಆದ ಲೆಕ್ಕವೇ ಎಂದು ಕೆಲವರು ಊಹಿಸಿದ್ದಾರೆ.
ರೈತ ಸಂತೋಷ್ ಅವರು ಹಳ್ಳಿಕಾರ್ ತಳಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿರುವ ಇವರನ್ನು ಹಳ್ಳಿಕಾರ್ ಒಡೆಯ ಎಂದು ಕರೆಯಲಾಗುತ್ತದೆ. ಬಿಗ್ ಬಾಸ್‌ಗೆ ಬಂದಾಗಲೂ ಕೂಡ ಹಳ್ಳಿಕಾರ್ ತಳಿಯ ಬಗ್ಗೆ ಮಾತನಾಡಿದ್ದರು.
Varthur Santosh, a contestant of Bigg Boss Kannada Season 10, was arrested by the forest department for wearing a tiger claw locket. Possession of tiger nails is against the law. One cannot sell or purchase tiger claws. He was seen wearing the locket during the show. An FIR was filed based on this, which led the forest officials to his arrest.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm