ಬ್ರೇಕಿಂಗ್ ನ್ಯೂಸ್
06-08-20 09:36 am Headline Karnataka News Network ಕರ್ನಾಟಕ
ಬೆಂಗಳೂರು, ಆ. 06: ಬಹುದೊಡ್ಡ ಸವಾಲನ್ನು ಎಳೆದುಕೊಂಡು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಾಡಿ ಮುಗಿಸಿದ್ದಾರೆ. ಕೊರೊನಾ ವೈರಸ್ ಹರಡುವ ಭಯದಲ್ಲಿ ಸುರಕ್ಷಿತವಾಗಿ ಪರೀಕ್ಷೆಗಳು ಮುಗಿದಿದ್ದವು. ಜೊತೆಗೆ ಪರೀಕ್ಷಾ ಮೌಲ್ಯಮಾಪನ ಕೂಡ ಶುರುವಾಗಿತ್ತು. ಇದೀಗ ನಾಳೆ ಎಸ್ಎಸ್ಎಲ್ ಪರೀಕ್ಷಾ ಫಲಿತಾಂಶ ಬರಲಿದೆ ಎಂಬ ಸುದ್ದಿ ಬಂದಿದೆ.
ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಾರಿ ಕೊರೊನಾ ವೈರಸ್ನಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ಇನ್ನೇನು 10ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಬೇಕು ಎಂಬ ಸಮಯದಲ್ಲಿ ಕೋವಿಡ್-19 ದಿಢೀರ್ ಹಾವಳಿ ಶುರುಮಾಡಿತ್ತು. ಮುಂದುವರೆದ ಅಮೆರಿಕ, ಇಟಲಿ, ಚೀನಾ ಹಾಗೂ ಇಂಗ್ಲಂಡ್ ನಂತಹ ದೇಶಗಳೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸಿ ಹೋಗಿದ್ದವು. ಆತಂಕದ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮುಗಿಸಿದ್ದಾರೆ.
ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾಥಿಗಳು ಪರೀಕ್ಷೆಯನ್ನು ಬರೆದಿದ್ದರು. ಪರೀಕ್ಷಾ ಸಂದರ್ಭದಲ್ಲಿ 33 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಅವರಿಗೆ ಪರೀಕ್ಷೆಯನ್ನು ನಿರಾಕರಿಸಿ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಅವಕಾಶವನ್ನ ಕಲ್ಪಿಸಲಾಗುತ್ತಿದೆ.

ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ:
ಇದೀಗ ನಾಳೆ (ಆ. 07) ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ಬಂದಿದೆ. ಅದಕ್ಕೆ ಸ್ಪಷ್ಟನೆ ಕೊಟ್ಟಿರುವ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಫಲಿತಾಂಶ ಪ್ರಕಟ ಮಾಡಲು ಇನ್ನೂ ದಿನಾಂಕ ನಿಶ್ಚಯವಾಗಿಲ್ಲ. ಅಧಿಕೃತವಾಗಿ ಶಿಕ್ಷಣ ಇಲಾಖೆ ಸಮಗ್ರ ಮಾಹಿತಿಯನ್ನು ಕೊಡಲಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟದ ಸುದ್ದಿ ಸುಳ್ಳು ಎಂದಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm