ಬ್ರೇಕಿಂಗ್ ನ್ಯೂಸ್
08-11-23 05:19 pm HK News Desk ಕರ್ನಾಟಕ
ಹುಬ್ಬಳ್ಳಿ, ನ.8: ಎಎಸ್ಐ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡ ಎಎಸ್ಐ ಆಗಿದ್ದಾರೆ.
ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು. ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ತಕ್ಷಣ ಕುಟುಂಬಸ್ಥರು ಅವರನ್ನು ಲಕ್ಷೇಶ್ವರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟೊತ್ತಿಗಾಗಲೇ ಬಸವರಾಜ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಎಸ್ಐ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗಗೊಂಡಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಎಎಸ್ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ಬಸವರಾಜ ಅವರು ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಪತ್ನಿ ಮತ್ತು ಮೂವರು ಮಕ್ಕಳು ಇದ್ದಾರೆ. ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ASI of Gudgeri police station commits suicide at Hubballi.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm