ಬ್ರೇಕಿಂಗ್ ನ್ಯೂಸ್
10-11-23 01:39 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಚರ್ಚೆ ನಡೆಸಿದರು.
ಮಂಗಳೂರು - ಬೆಂಗಳೂರು ಹಸಿರುವ ವಲಯ ಹೈ ಸ್ಪೀಡ್ ಕಾರಿಡಾರ್ ಮಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ಮಾರ್ಗ ಮಧ್ಯೆ ಬರುವ ಇತರ ನಗರಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. 6 ರಿಂದ 8 ಲೈನ್ ಹೈಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಪ್ರಾರಂಭಿಕ ಹಂತವಾಗಿ ಸಚಿವರೊಂದಿಗೆ ಸಂಸ್ಥೆಯ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೈ ಸ್ಪೀಡ್ ಕಾರಿಡಾರ್ ಮಂಗಳೂರಿಗೆ ಹೆಚ್ಚಿನ ಬಂಡವಾಳವನ್ನ ತರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರಿಡಾರ್ ರಸ್ತೆ ಮಂಗಳೂರು ಪೋರ್ಟ್ ಗೂ ಕನೆಕ್ಟ್ ಮಾಡುವುದರಿಂದ ವ್ಯಾಪಾರ ಉದ್ಯಮಗಳ ಬೆಳವಣಿಗೆಗೆ ನೆರವಾಗಲಿದೆ ಎಂದರು.
ಕಾರಿಡಾರ್ ರೋಡ್ ಮ್ಯಾಪ್ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭರವಸೆ ನೀಡಿದರು. ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನ ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The head of The European Institute of Business and Technology held discussions with Dakshina Kannada district in-charge minister Dinesh Gundu Rao and Udupi district in-charge minister Lakshmi Hebbalkar on the construction of mangaluru integrated greenfield high-speed corridor.
19-01-26 03:08 pm
Bangalore Correspondent
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm