ಬ್ರೇಕಿಂಗ್ ನ್ಯೂಸ್
15-11-23 12:14 pm Bangalore Correspondent ಕರ್ನಾಟಕ
ಬೆಂಗಳೂರು, ನ.15: ನಮ್ಮ ಮುಂದಿನ ಗುರಿ ಲೋಕಸಭೆ ಚುನಾವಣೆ. ದೇಶದ ಭವಿಷ್ಯಕ್ಕಾಗಿ, ದೇಶಕ್ಕಾಗಿ 24 ಗಂಟೆ ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದಕ್ಕಾಗಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನೂ ಗೆಲ್ಲಬೇಕಾಗಿದೆ. ಅದಕ್ಕಾಗಿ ನಾವೆಲ್ಲ ಪ್ರಾಮಾಣಿಕವಾಗಿ ದುಡಿಯಬೇಕಾಗಿದ್ದು ಲೋಕಸಭೆ ಗೆಲ್ಲುವುದೇ ನಮ್ಮ ಸಂಕಲ್ಪವಾಗಬೇಕು ಎಂದು ರಾಜ್ಯ ಬಿಜೆಪಿ ನೂತನ ಸಾರಥಿ ಬಿವೈ ವಿಜಯೇಂದ್ರ ಹೇಳಿದ್ದಾರೆ.
ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ ಬಳಿಕ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿರುವುದು ನಿಜ. ಅದನ್ನು ನಾವು ಹಿನ್ನಡೆಯೆಂದು ಭಾವಿಸದೆ ಮತ್ತೆ ಪಕ್ಷವನ್ನು ವಿಜಯದತ್ತ ಒಯ್ಯಬೇಕಾಗಿದೆ. ಮುಂದಿನ ಗುರಿ ಇಡೀ ದೇಶದ ಭವಿಷ್ಯ ನಿರ್ಣಯಿಸುವ ಲೋಕಸಭೆ ಚುನಾವಣೆಯಾಗಿದ್ದು, ನಾವು ಒಂದು ಕ್ಷಣ ವಿರಮಿಸದೆ ಪಕ್ಷ ಕಟ್ಟಬೇಕಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಅಧ್ಯಕ್ಷರು ನನಗೆ ಮಹತ್ವದ ಸ್ಥಾನವನ್ನು ನೀಡಿದ್ದಾರೆ, ನನಗೆ ಈ ಸ್ಥಾನದ ಮಹತ್ವ ಮತ್ತು ಜವಾಬ್ದಾರಿ ಗೊತ್ತಿದೆ. ನನ್ನ ನಡವಳಿಕೆಯಿಂದ ರಾಜ್ಯದ ಯಾವುದೇ ಕಾರ್ಯಕರ್ತ ತಲೆತಗ್ಗಿಸುವ ಅವಕಾಶ ಬರಲಾರದು ಎಂದು ಭರವಸೆ ನೀಡುತ್ತೇನೆ. ನಿಮ್ಮೆಲ್ಲರ ಪಾಲಿನ ಶಕ್ತಿಯಾಗಿ ದುಡಿಯುತ್ತೇನೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು ಆರು ತಿಂಗಳಾಗಿದೆ, ಹಿಂದೆ ಬಿಜೆಪಿ ಸರಕಾರದ ಮೇಲೆ ಯಾವುದೇ ದಾಖಲೆ ಇಲ್ಲದಿದ್ದರೂ ನಲ್ವತ್ತು ಪರ್ಸೆಂಟ್ ಸರಕಾರ ಎಂದು ಆರೋಪ ಮಾಡಿದ್ದರು. ಈ ಆರೋಪವನ್ನು ಜನರು ನಂಬಿದ್ದರು. ಆದರೆ ನಮ್ಮ ಮೇಲೆ ನಲ್ವತ್ತು ಪರ್ಸೆಂಟ್ ಎನ್ನುತ್ತಿದ್ದವರು ಅದೇ ಆರೋಪವನ್ನು ರಾಜ್ಯದಲ್ಲಿ ಜಾರಿಗೆ ತರುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಈ ಭ್ರಷ್ಟ ಸರಕಾರಕ್ಕೆ ದಿಟ್ಟ ಉತ್ತರವನ್ನು ನೀಡಬೇಕಾಗಿದೆ ಎಂದರು.
Our next target is the Lok Sabha elections. We need to win 28 out of 28 seats in the state to make Narendra Modi, who has been working 24 hours a day for the country, the prime minister again. For that, we all have to work sincerely and our resolve should be to win the Lok Sabha elections," said BY Vijayendra, the new state BJP chief.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm